ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಮೂತ್ರ ಪಿಂಡ ವೈಫಲ್ಯ: ಖ್ಯಾತ ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನ

ಖ್ಯಾತ ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನರಾಗಿದ್ದು ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಲೀನಾ ಆಚಾರ್ಯ
Srinivasa Murthy VN
Updated On : 22 Nov 2020, 1:11 pm

ಮುಂಬೈ: ಖ್ಯಾತ ಹಿಂದಿ ಕಿರುತೆರೆ ನಟಿ ಲೀನಾ ಆಚಾರ್ಯ ನಿಧನರಾಗಿದ್ದು ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಲೀನಾ, ಹಿಂದಿಯ 'ಶೇಠ್ ಜೀ, ಆಪ್ ಕೇ ಆ ಜಾನೇ ಸೇ, ಮೇರಿ ಹಾನಿಕಾಕರ್ ಬೀವೀ ಹಾಗೂ ಕ್ಲಾಸ್ ಆಫ್ 2020 ಮುಂತಾದ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದರು. ಅಲ್ಲದೆ ಬಾಲಿವುಡ್‌ನ ಹಿಚ್ಕಿ ಸಿನಿಮಾದಲ್ಲೂ ಆಕೆ ನಟಿಸಿದ್ದರು.  ‘ಲೀನಾ ಕಳೆದ ಒಂದೂವರೆ ವರ್ಷದಿಂದ  ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ತಾಯಿ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದರು. ಆದರೂ ಆಕೆ ಬದುಕಲಿಲ್ಲ’ ಎಂದು ಶೇಠ್‌ ಜೀ ಸಹನಟ ವರ್ಷಿಪ್‌ ಖನ್ನಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕ್ಲಾಸ್ ಆಫ್ 2020 ನಟ ರೋಹನ್ ಮೆಹ್ರಾ ಕೂಡ ಲೀನಾ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಟ್ವಿಟ್ಟರ್ ಖಾತೆಯಲ್ಲಿ ‘ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಲೀನಾ ಮ್ಯಾಮ್‌, ಕಳೆದ ವರ್ಷ ಈ ಸಮಯದಲ್ಲಿ ನಾವು ಕ್ಲಾಸ್ ಆಫ್ 2020 ಶೂಟಿಂಗ್ ನಲ್ಲಿದ್ದೆವು. ನಿಮ್ಮನ್ನು ತುಂಬಾ ಮಿಸ್  ಮಾಡಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments