ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್-19 ಪಾಸಿಟಿವ್
ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ.
ಮುಂಬೈ: ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ರೋಶನ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿತ್ರ ನಿರ್ಮಾಪಕ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ಈ ವಿಷಯವನ್ನು ತಿಳಿಸಿದ್ದಾರೆ.
69 ವರ್ಷದ ಪಿಂಕಿ ರೋಶನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ನಿಜ. ಯಾವುದೇ ರೋಗ ಲಕ್ಷಣಗಳಿಲ್ಲ. ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ಹೇಳಿದ್ದಾರೆ.
ಹುಟ್ಟುಹಬ್ಬದ ಸಂದರ್ಭದಲ್ಲಿ ಕುಟುಂಬದವರು ನೀಡಿದ್ದ ಗಿಫ್ಟ್ ಗಳನ್ನು ಪಿಂಕಿ ರೋಶನ್ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.
ಮುಂಬೈನಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 2,45,871ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 9,869 ಆಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.