ಕಂಗನಾ ರಣಾವತ್ 
ಬಾಲಿವುಡ್

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ಮತ್ತು ಸಹೋದರಿಗೆ ಸಮನ್ಸ್

ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ನವದೆಹಲಿ: ದೇಶದ್ರೋಹ ಪ್ರಕರಣದ ಅಡಿ ಪೊಲೀಸ್​ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ಅವರಿಗೆ ಸಮನ್ಸ್​ ಜಾರಿ ಮಾಡಲಾಗಿದೆ. 

ವಿಜಯದಶಮಿ ಹಬ್ಬದ ದಿನವಾದ ಅ.26 ಮತ್ತು 27ರಂದು ಅವರು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೆಲ್​ ತಮ್ಮ ಟ್ವೀಟ್​ಗಳ ಮೂಲಕ ಕೋಮು ದ್ವೇಷವನ್ನು ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ​ ದೂರಿನ ಕುರಿತು ದಾಖಲಾದ ಎಫ್​ಐಆರ್​ ಅಡಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು.

ನಟಿ ಕಂಗನಾ ಮತ್ತವರ ಸಹೋದರಿ ಟ್ವೀಟ್​ ಮೂಲಕ ಕೋಮುದ್ವೇಷ ಹರಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಸಾಹಿಲ್​ ಆಸ್ರಫ್​ಆಲಿ ಸಯ್ಯದ್​ ಬಾಂದ್ರಾ ಮೆಟ್ರೋಪಾಲಿಟನ್​ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಈ ಕ್ರಮಕ್ಕೆ ಮುಂದಾಗಲಾಗಿದೆ.

ಕಂಗಾನಾ ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಾರೆ. ಇದು ಧಾರ್ಮಿಕ ಮನೋಭಾವಕ್ಕೆ ಧಕ್ಕೆ ತರುವಂತೆ ಇದೆ. ಅಷ್ಟೇ ಅಲ್ಲದೇ , ಅನೇಕ ಕಲಾವಿದರ ಭಾವನೆಗಳು ಚ್ಯುತಿ ತರುತ್ತಿದೆ. ಕಂಗನಾ ಕಲಾವಿದರನ್ನು ಕೋಮು ವರ್ಗದಲ್ಲಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಯ್ಯದ್​ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT