ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ನಟ ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ: ಡ್ರಗ್‌ ಡೀಲರ್‌ ಅರೆಸ್ಟ್

ನಟ ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್‌ ಡೀಲರ್‌ ಒಬ್ಬನನ್ನು ಮಾದಕವಸ್ತುಗಳ ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. 

ಮುಂಬೈ: ನಟ ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್‌ ಡೀಲರ್‌ ಒಬ್ಬನನ್ನು ಮಾದಕವಸ್ತುಗಳ ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. 

ಬಂಧಿತನನ್ನು ಜೈದ್  ವಿಲ್ಲಾತ್ರಾ ಎಂದು ಗುರುತಿಸಲಾಗಿದೆ. ಈತ ಮುಂಬೈನಲ್ಲಿ ನಡೆಯುವ ಐಶಾರಾಮಿ ಪಾರ್ಟಿಗಳಿಗೆ ಗಾಂಜಾ ಸೇರಿದಂತೆ ಇತರ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ. ಉತ್ತಮ ಗುಣಮಟ್ಟದ ಗಾಂಜಾವನ್ನು ಗ್ರಾಂಗೆ 5 ಸಾವಿರದಂತೆ ಮಾರುತ್ತಿದ್ದ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಿವುಡ್ ನಟ ಸುಶಾಂತ್‌ಸಿಂಗ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾದ ಮಾದಕವಸ್ತು ಪ್ರಕರಣದ ವಿಚಾರಣೆ ವೇಳೆ ದೊರೆತ ಪ್ರಮುಖ ಮಾಹಿತಿಗಳನ್ನು ಆಧರಿಸಿ ಈತನನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ಹೇಳಿದ್ದಾರೆ.

ಮುಂಬೈ ಮಹಾನಗರದ ಪಶ್ಚಿಮ ಭಾಗದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಳೆದವಾರ ಎನ್‌ಸಿಬಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ