ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ಸುಶಾಂತ್‌ ಸಿಂಗ್‌ ಜೀವ ವಿಮೆ ಮಾಡಿಸಿಯೇ ಇಲ್ಲ: ತಪ್ಪು ಮಾಹಿತಿ ನೀಡಲಾಗುತ್ತಿದೆ; ಸುಶಾಂತ್ ವಕೀಲ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಜೀವ ವಿಮೆ ಮಾಡಿಸಿಯೇ ಇರಲಿಲ್ಲ, ಸುಶಾಂತ್ ಜೀವ ವಿಮೆ ಮಾಡಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ ಎಂದು ಸುಶಾಂತ್ ಪರ ವಕೀಲ ಕೆಕೆ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.

ನವದೆಹಲಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಜೀವ ವಿಮೆ ಮಾಡಿಸಿಯೇ ಇರಲಿಲ್ಲ, ಸುಶಾಂತ್ ಜೀವ ವಿಮೆ ಮಾಡಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ ಎಂದು ಸುಶಾಂತ್ ಪರ ವಕೀಲ ಕೆಕೆ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.

ಇತ್ತೀಚೆಗೆ ಮೃತಪಟ್ಟ ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರು ಜೀವ ವಿಮೆ ಹೊಂದಿದ್ದಾರೆ. ಆದರೆ, ಅವರೇನಾದರೂ ಆತ್ಮಹತ್ನೆ ಮಾಡಿಕೊಂಡಿದ್ದರೆ ವಿಮೆ ಹಣವು ಅವರ ಕುಟುಂಬದವರಿಗೆ ಸಿಗುವುದಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುಶಾಂತ್‌ ಅವರ ತಂದೆ ಕೆಕೆ ಸಿಂಗ್ ಪರ ವಕೀಲ ವಿಕಾಸ್‌ ಸಿಂಗ್‌‌, ನಟ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸುಳ್ಳು ಮತ್ತು ಅವರು ಜೀವ ವಿಮೆಯನ್ನೇ ಮಾಡಿಸಿರಲಿಲ್ಲ ಎಂದು ಹೇಳಿದ್ದಾರೆ. 

‘ಸುಶಾಂತ್‌ ಅವರು ಜೀವ ವಿಮಾ ಪಾಲಿಸಿಗಳನ್ನು ಮಾಡಿಸಿದ್ದರು. ಒಂದುವೇಳೆ ಅವರೇನಾದರೂ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕುಟುಂಬದವರಿಗೆ ವಿಮೆಯ ಹಣ ಸಿಗುವುದಿಲ್ಲ. ಈ ಕಾರಣಕ್ಕಾಗಿಯೇ ಆತ್ಮಹತ್ಯೆ ಪ್ರಕರಣವನ್ನು ಆತ್ಮಹತ್ಯೆಗೆ ಪ್ರೇರಣೆ ನೀಡಲಾಗಿದೆ ಅಥವಾ ಕೊಲೆ ಎಂದು ಬಿಂಬಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದು ಮಾಧ್ಯಮಗಳು ಹರಡುತ್ತಿರುವ ಸುಳ್ಳು. ಸುಶಾಂತ್‌ ಯಾವುದೇ ಜೀವ ವಿಮೆಯನ್ನು ಹೊಂದಿಲ್ಲ’ ಎಂದು ತಿಳಿಸಿದ್ದಾರೆ.

ಈ ಸುಳ್ಳು ಆರೋಪವು ತೀವ್ರ ಮಾನಹಾನಿಕರವಾಗಿದೆ. ಸುದ್ದಿ ವಾಹಿನಿಗಳು ಇದೇರೀತಿ ಮುಂದುವರಿದರೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರನ್ನು ಒತ್ತಾಯಿಸಲಾಗುವುದು’ ಎಂದೂ ಹೇಳಿದ್ದಾರೆ. ಜೊತೆಗೆ ಅನುಮತಿ ಪಡೆಯದೆ ನಟನಿಗೆ ಸಂಬಂಧಿಸಿದಂತೆ ಯಾವುದೇ ಪುಸ್ತಕ, ಸಿನಿಮಾ ಅಥವಾ‌ ಧಾರಾವಾಹಿ ನಿರ್ಮಿಸುವಂತಿಲ್ಲ ಎಂಬ ನಿರ್ಧಾರವನ್ನು ಸುಶಾಂತ್ ತಂದೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT