ಕಂಗನಾ 
ಬಾಲಿವುಡ್

ಸಂಜಯ್ ರೌತ್ ರನ್ನು ಟೀಕಿಸುವುದು ಮಹಾರಾಷ್ಟ್ರಕ್ಕೆ ಅವಮಾನವಲ್ಲ: ಕಂಗನಾ

ಶಿವಸೇನೆ ಸಂಸದ ಸಂಜಯ್ ರೌತ್ ಮತ್ತು ಬಾಲಿವುಡ್ ನಟಿ ಕಂಗನಾ ರನೌತ್ ನಡುವಿನ ವಾಕ್ಸಮರ ಮುಂದುವರೆದಿದ್ದು, ಸೇನಾ ನಾಯಕ ಇಡೀ ಮಹಾರಾಷ್ಟ್ರವನ್ನು ಪ್ರತಿನಿಧಿಸುವುದಿಲ್ಲ ಎಂದು ಕ್ವೀನ್ ತಿರುಗೇಟು ನೀಡಿದ್ದಾರೆ.

ಮುಂಬೈ: ಶಿವಸೇನೆ ಸಂಸದ ಸಂಜಯ್ ರೌತ್ ಮತ್ತು ಬಾಲಿವುಡ್ ನಟಿ ಕಂಗನಾ ರನೌತ್ ನಡುವಿನ ವಾಕ್ಸಮರ ಮುಂದುವರೆದಿದ್ದು, ಸೇನಾ ನಾಯಕ ಇಡೀ ಮಹಾರಾಷ್ಟ್ರವನ್ನು ಪ್ರತಿನಿಧಿಸುವುದಿಲ್ಲ ಎಂದು ಕ್ವೀನ್ ತಿರುಗೇಟು ನೀಡಿದ್ದಾರೆ.

ಮಹಿಳೆಯರನ್ನು ಶೋಷಿಸುವವರಿಗೆ ಅಧಿಕಾರ ನೀಡಲಾಗಿದೆ ಎಂದು ಆರೋಪಿಸಿರುವ ಬಾಲಿವುಡ್ ನಟಿ, ಭಾರತದ ಹೆಣ್ಣುಮಕ್ಕಳು ತಮ್ಮನ್ನು ನಿಂದಿಸುವವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

"ಸಂಜಯ್ ರೌತ್ ಜಿ, ನೀವು ನನ್ನನ್ನು ಕೆಟ್ಟ ಪದಗಳಿಂದ ನಿಂದಿಸಿದ್ದೀರಿ. ಇದು ನಿಮ್ಮ ಮನಸ್ಥಿತಿಯನ್ನು ತೋರಿಸುತ್ತದೆ ... ನಾನು ಮುಂಬೈ ಪೊಲೀಸರನ್ನು ಟೀಕಿಸಿದರೆ ಅಥವಾ ನಿಮ್ಮನ್ನು ಟೀಕಿಸಿದರೆ, ನಾನು ಮಹಾರಾಷ್ಟ್ರವನ್ನು ಅವಮಾನಿಸುತ್ತಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ. ನೀವು ಮಹಾರಾಷ್ಟ್ರವಲ್ಲ. ನಿಮ್ಮ ಜನರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ಆದರೂ ನಾನು ಸೆಪ್ಟೆಂಬರ್ 9 ರಂದು ಮುಂಬೈಗೆ ಬರುತ್ತೇನೆ "ಎಂದು ರನೌತ್ ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಹಾಕಿರುವ ವೀಡಿಯೊದಲ್ಲಿ ಹೇಳಿದ್ದಾರೆ.

"ನಿಮ್ಮ ಜನರು ನನ್ನ ದವಡೆ ಮುರಿಯುತ್ತೇನೆ ಕೊಲ್ಲುತ್ತೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರು  ನನ್ನನ್ನು ಕೊಲ್ಲಲಿ, ನಾನು ಹೆದರುವುದಿಲ್ಲ. ಈ ದೇಶದ ಮಣ್ಣು ಅದರ ಘನತೆಗಾಗಿ ತ್ಯಾಗ ಮಾಡಿದವರ ರಕ್ತದಿಂದ ಸಮೃದ್ಧವಾಗಿದೆ ಮತ್ತು ನಾವೂ ಸಹ ಅದೇ ರೀತಿ ಮಾಡುತ್ತೇವೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ