ನಟ ಅರ್ಜುನ್ ಕಪೂರ್ಗೂ ವಕ್ಕರಿಸಿದ ಕೊರೋನಾ!
ಬಾಲಿವುಡ್ ನಟ ಅರ್ಜುನ್ ಕಪೂರ್ ಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಅರ್ಜುನ್ ತಮ್ಮ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ತಿಳಿಸಿದ್ದಾರೆ.
ನವದೆಹಲಿ: ಬಾಲಿವುಡ್ ನಟ ಅರ್ಜುನ್ ಕಪೂರ್ ಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಅರ್ಜುನ್ ತಮ್ಮ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದಾಗಿ ತಿಳಿಸಿದ್ದಾರೆ.
ಜೊತೆಗೆ, ತಾವು ಆರೋಗ್ಯವಾಗಿದ್ದು, ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.
"ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ನಿಮಗೆಲ್ಲಾ ತಿಳಿಸುವುದು ನನ್ನ ಕರ್ತವ್ಯ. ನಾನು ಆರಾಮಾಗಿದ್ದೇನೆ ಮತ್ತು ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ವೈದ್ಯರು ಮತ್ತು ಅಧಿಕಾರಿಗಳ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದೇನೆ.
ನಿಮ್ಮೆಲ್ಲರ ಬೆಂಬಲಕ್ಕಾಗಿ ಮುಂಚಿತವಾಗಿ ಧನ್ಯವಾದ ಹೇಳುತ್ತಿದ್ದೇನೆ ಮತ್ತು ನನ್ನ ಆರೋಗ್ಯದ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದೇನೆ. ಇವು ವಿಶೇಷ ಮತ್ತು ಅನಿರೀಕ್ಷಿತ ಸಮಯವಾಗಿದ್ದು, ಎಲ್ಲಾ ಮಾನವೀಯ ಗುಣಗಳು ಈ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸಲಿವೆ ಎಂಬ ನಂಬಿಕೆಯಿದೆ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.