ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ 
ಬಾಲಿವುಡ್

ಸುಶಾಂತ್ ಸಿಂಗ್ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ಬಂಧನ

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ಸಿಬಿ) ತನಿಖೆ ಕೈಗೊಂಡಿದ್ದು ಎರಡು ದಿನಗಳ ತೀವ್ರ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ. 

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ಸಿಬಿ) ತನಿಖೆ ಕೈಗೊಂಡಿದ್ದು ಎರಡು ದಿನಗಳ ತೀವ್ರ ವಿಚಾರಣೆ ಬಳಿಕ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ. 

ಪ್ರಕರಣ ಸಂಬಂಧ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಯನ್ನು ಎನ್ಸಿಬಿ ಅಧಿಕಾರಿಗಳು ಕಳೆದ ವಾರ ಬಂಧಿಸಿದ್ದರು. ಇದೀಗ ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ಇದೀಗ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ.

ಎನ್ ಸಿಬಿ ವಿಚಾರಣೆ ಸಂದರ್ಭದಲ್ಲಿ ಸತ್ಯ ಒಪ್ಪಿಕೊಂಡಿರುವ ರಿಯಾ ಚಕ್ರವರ್ತಿ, ತಾವು ಸುಶಾಂತ್ ಸಿಂಗ್ ರಜ್ಪೂತ್ ಜೊತೆ ಗಾಂಜಾ ತುಂಬಿಸಿದ್ದ ಸಿಗರೇಟ್ ನ್ನು ಸೇದುತ್ತಿದ್ದೆ ಎಂದು ಹೇಳಿದ್ದಾರೆ. 

2016 ರಿಂದ ಸುಶಾಂತ್ ಸಹ ಡ್ರಗ್ಸ್ ಸೇವಿಸುತ್ತಿದ್ದರು ಎಂಬ ಅಘಾತಕಾರಿ ಅಂಶವನ್ನೂ ರಿಯಾ ಎನ್ ಸಿಬಿ ಎದುರು ಬಹಿರಂಗಪಡಿಸಿದ್ದಾರೆ.

ಸುಶಾಂತ್​ ಸಾವಿನ ಜತೆ ಡ್ರಗ್ಸ್​ ನಂಟು ಥಳುಕು ಹಾಕಿಕೊಂಡಿತ್ತು. ಹೀಗಾಗಿ ಎನ್​ಸಿಬಿ ತನಿಖೆ ನಡೆಸುತ್ತಿದೆ. ಪರಿಣಾಮ ಈಗಾಗಲೇ ಹಲವು ಡ್ರಗ್​ ಪೆಡ್ಲರ್​ಗಳು ಬಂಧಿಸಿದೆ. ಆದರೆ ಡ್ರಗ್ಸ್ ಗೆ ಸಂಬಂಧಿಸಿದಂತೆ ಇದುವರೆಗೂ ಸತ್ಯ ಒಪ್ಪದಿದ್ದ ರಿಯಾ ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video