ಕಂಗನಾ 
ಬಾಲಿವುಡ್

ನನ್ನ ಮನೆಯಂತೆ ನಿಮ್ಮ ಅಹಂಕಾರವೂ ಧ್ವಂಸವಾಗಲಿದೆ: ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘರ್ಜಿಸಿದ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ನಿವಾಸದಲ್ಲಿ ಬಿಎಂಸಿ ತೆರವು ಕಾರ್ಯಾಚರಣೆ ನಡೆಸಿರುವ ಬೆನ್ನಲ್ಲೇ ನಟಿ ಕಂಗನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. 

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ನಿವಾಸದಲ್ಲಿ ಬಿಎಂಸಿ ತೆರವು ಕಾರ್ಯಾಚರಣೆ ನಡೆಸಿರುವ ಬೆನ್ನಲ್ಲೇ ನಟಿ ಕಂಗನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. 

ಟ್ವಿಟರ್ ನಲ್ಲಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿರುವ ಕಂಗನಾ, ಕಾಶ್ಮೀರಿ ಪಂಡಿತರು ತಮ್ಮ ಆಸ್ತಿಗೆ ಹಾನಿಯಾದಾಗ ಯಾವ ರೀತಿಯ ನೋವು ಅನುಭವಿಸಿದ್ದರು ಎಂಬುದು ತಮಗೆ ಈಗ ಅರ್ಥವಾಗುತ್ತಿದೆ ಎಂದು ಹೇಳಿದ್ದಾರೆ.

ಮುಂದುವರಿದು, " ಉದ್ಧವ್ ಠಾಕ್ರೆ ನೀವು ಫಿಲ್ಮ್ ಮಾಫಿಯಾ ಜೊತೆ ಸೇರಿ ನನ್ನ ಮನೆ ಮುರಿದು ದೊಡ್ಡ ಸೇಡು ತೀರಿಸಿಕೊಂಡಿದ್ದೀವೆಂದು ಭಾವಿಸಿದ್ದೀರಾ? ಇವತ್ತು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರ ಮುರಿಯಲಿದೆ ಎಂದು ಇದು ಕಾಲ ಚಕ್ರ, ಇದನ್ನು ನೆನಪಿಡಿ, ಕಾಲ ಹೀಗೆಯೇ ಇರುವುದಿಲ್ಲ ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ. 

ನೀವು ನನಗೆ ದೊಡ್ಡ ಉಪಕಾರ ಮಾಡಿದ್ದೀರ, ಈವರೆಗೂ ಕಾಶ್ಮೀರಿ ಪಂಡಿತರು ಎದುರಿಸಿದ್ದ ಪರಿಸ್ಥಿತಿಯ ಬಗ್ಗೆ ತಿಳಿದಿತ್ತು. ಈಗ ಅದನ್ನು ಸ್ವತಃ ಅನುಭವಿಸಿದೆ ಎಂದು ಹೇಳಿದ್ದು ಕಾಶ್ಮೀರ, ಅಯೋಧ್ಯೆ ಬಗ್ಗೆ ಸಿನಿಮಾ ಮಾಡುವುದಾಗಿ ಕಂಗನಾ ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!