ದೀಪಿಕಾ 
ಬಾಲಿವುಡ್

ಬಾಲಿವುಡ್ ಡ್ರಗ್ಸ್ ಪ್ರಕರಣ: ಸತತ 5 ಗಂಟೆಗಳ ವಿಚಾರಣೆ ಬಳಿಕ ಎನ್ ಸಿಬಿ ಕಚೇರಿಯಿಂದ ತೆರಳಿದ ದೀಪಿಕಾ

ಬಾಲಿವುಡ್-ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಶನಿವಾರ ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಬಾಲಿವುಡ್-ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಶನಿವಾರ ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ದಕ್ಷಿಣ ಮುಂಬೈನ ಕೊಲಬಾದಲ್ಲಿರುವ ಎನ್ ಸಿಬಿ ಕಚೇರಿಗೆ ಆಗಮಿಸಿದ ದೀಪಿಕಾ ಪಡುಕೋಣೆ ಅವರನ್ನು ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಸಂಜೆ ಕಚೇರಿಯಿಂದ ನಟಿ ತೆರಳಿದರು ಎಂದು ಅವರು ಹೇಳಿದ್ದಾರೆ.

ದೀಪಿಕಾ ತಮ್ಮ ಮ್ಯಾನೇಜರ್​ ಕರಿಷ್ಮಾ ಪ್ರಕಾಶ್​ ಜತೆಗೆ ಡ್ರಗ್ಸ್​ ಬಗ್ಗೆ ನಡೆಸಿದ ವಾಟ್ಸ್​​ಆ್ಯಪ್​ ಚಾಟ್​ ಫೋಟೋ ವೈರಲ್​ ಆಗಿತ್ತು. ಅದೇ ಬೆನ್ನಲ್ಲೇ ದೀಪಿಕಾ ಪಡುಕೋಣೆಗೆ ಎನ್​ಸಿಬಿ ಸಮನ್ಸ್​ ನೀಡಿತ್ತು. ಈಗಾಗಲೇ ಅಧಿಕಾರಿಗಳಿಂದ ವಿಚಾರಣೆಗೆ ಒಳಪಟ್ಟಿರುವ ಕರಿಷ್ಮಾ, ಡ್ರಗ್ಸ್ ಕುರಿತು ಚಾಟ್​ ನಡೆದಿರುವ ವಾಟ್ಸ್​​ಆ್ಯಪ್​ ಗ್ರೂಪ್​ಗೆ ದೀಪಿಕಾ ಅವರೇ ಅಡ್ಮಿನ್​ ಆಗಿದ್ದರು ಎಂಬ ವಿಷಯವನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ದೀಪಿಕಾ ಪಡುಕೋಣೆ ತಾವು ಡ್ರಗ್ಸ್​ಗೆ ಸಂಬಂಧಪಟ್ಟಂತೆ 2017ರಲ್ಲಿ ಕರಿಷ್ಮಾ ಜತೆಗೆ ಚಾಟ್​ ಮಾಡಿರುವುದು ಸತ್ಯ. ಆದರೆ ತಾವು ಡ್ರಗ್ಸ್ ಸೇವಿಸಿಲ್ಲ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!