ಸೋನು ಸೂದ್ 
ಬಾಲಿವುಡ್

ಲಸಿಕೆ ಪಡೆದ 10 ದಿನದ ನಂತರ ನಟ ಸೋನು ಸೂದ್ ಗೆ ಕೊರೋನಾ ದೃಢ!

ಕೊರೋನಾ ಸಂಕಟದ ನಡುವೆ ಅನೇಕ ವಲಸಿಗ ಕಾರ್ಮಿಕರೂ ಸೇರಿ ಸಾರ್ವಜನಿಕರಿಗೆ ನೆರವಾಗಿದ್ದ ನಟ ಸೋನು ಸೂದ್ ಗೆ ಕೊರೋನಾ ಸೋಂಕು ದೃಢವಾಗಿದೆ.

ಮುಂಬೈ: ಕೊರೋನಾ ಸಂಕಟದ ನಡುವೆ ಅನೇಕ ವಲಸಿಗ ಕಾರ್ಮಿಕರೂ ಸೇರಿ ಸಾರ್ವಜನಿಕರಿಗೆ ನೆರವಾಗಿದ್ದ ನಟ ಸೋನು ಸೂದ್ ಗೆ ಕೊರೋನಾ ಸೋಂಕು ದೃಢವಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ನಟ ಸೋನು ಸೂದ್ "ವರದಿಯಲ್ಲಿ ಪಾಸಿಟಿವ್ ಕಂಡುಬಂದ ತಕ್ಷಣ ಕ್ವಾರಂಟೈನ್ ಆಗಿದ್ದೇನೆ. ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ನನಗೀಗ ಹೆಚ್ಚಿನ ಸಮಯ ಸಿಗಲಿದೆ. ಏನೇ ಸಮಸ್ಯೆ ಇದ್ದಲ್ಲಿ ನಾನು ನಿಮ್ಮೊಂದಿಗಿದ್ದೇನೆ ಎಂದು ಮರೆಯಬೇಡಿ" ಎಂದಿದ್ದಾರೆ.

ಇನ್ನು ಸೋನು ಸೂದ್ ಲಸಿಕೆ ಪಡೆದ ಸುಮಾರು ಹತ್ತು ದಿನಗಳ ನಂತರ ಕೊರೋನಾಗೆ ಪಾಸಿಟಿವ್ ವರದಿ ಪಡೆದಿದ್ದಾರೆ.

ಇತ್ತೀಚೆಗೆ ಅವರು ಪಂಜಾಬಿನ ಕೊರೋನಾ ವಿರೋಧಿ ವ್ಯಾಕ್ಸಿನೇಷನ್ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದರು.

ಕಳೆದ ವರ್ಷ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಂದರ್ಭದಲ್ಲಿ ವಲಸಿಗರು ತಮ್ಮ ರಾಜ್ಯಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ರಾಷ್ಟ್ರದ ಗಮನ ಸೆಳೆದಿದ್ದ ನಟ ತಾವು ಈಗಲೂ ನಿಮ್ಮೊಡನಿದ್ದೇನೆ ಎಂದಿದ್ದಾರೆ. ಸೋನು ಸೂದ್ ಏಪ್ರಿಲ್ 7 ರಂದು ಲಸಿಕೆಯ ಮೊದಲ ಡೋಸ್ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ