ಶ್ರವಣ್ ರಾಥೋಡ್ 
ಬಾಲಿವುಡ್

ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿ!

ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿಯಾಗಿದ್ದಾರೆ. 

ಮುಂಬೈ: ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿಯಾಗಿದ್ದಾರೆ. 

ಮೂರು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 

ಶ್ರವಣ್ ರಾಥೋಡ್ ಮೃತಪಟ್ಟಿರುವ ವಿಚಾರವನ್ನು ಚಿತ್ರ ನಿರ್ದೇಶಕ ಅನಿಲ್ ಶರ್ಮಾ ಎಂಬುವರು ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ.

66 ವರ್ಷದ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಅವರು ಮುಂಬೈಯ ಎಸ್ ಎಲ್ ರಹೇಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಶ್ರವಣ್ ರಾಥೋಡ್ ಅವರ ಚೇತರಿಕೆಗಾಗಿ ಪ್ರಾರ್ಥಿಸೋಣ ಎಂದು ಸಂಗೀತ ನಿರ್ದೇಶಕ ನದೀಮ್ ಸೈಫಿ ಇನ್ಸಾಟಾಗ್ರಾಮ್ ನಲ್ಲಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. 

ನದೀಮ್- ಶ್ರವಣ್ 90ರ ದಶಕದಲ್ಲಿ ಪ್ರಖ್ಯಾತ ಸಂಗೀತ ಸಂಯೋಜಕರು. ಆಶಿಕಿ, ಸಜಾನ್, ಅಮಿರ್ ಖಾನ್ ಅಭಿನಯದ ರಾಜ ಹಿಂದೂಸ್ತಾನಿಯಂತಹ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ