ಶಿಲ್ಪಾ ಶೆಟ್ಟಿ 
ಬಾಲಿವುಡ್

ವಂಚನೆ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟೀಸ್

ವೆಲ್‌ನೆಸ್ ಸೆಂಟರ್‌ನ ಫ್ರಾಂಚೈಸಿ ಡೀಲ್‌ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ  ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ.

ವೆಲ್‌ನೆಸ್ ಸೆಂಟರ್‌ನ ಫ್ರಾಂಚೈಸಿ ಡೀಲ್‌ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ  ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಫ್ರಾಂಚೈಸಿ ಡೀಲ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಐಒಎಸ್ ಐಎಸ್  ವೆಲ್‌ನೆಸ್ ಸೆಂಟರ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಡೈರೆಕ್ಟರ್ ವಿರುದ್ಧ ಲಕ್ನೋನಲ್ಲಿ ದೂರು ದಾಖಲಾಗಿದೆ. ಕಂಪನಿಗೆ ಶಿಲ್ಪಾ ಶೆಟ್ಟಿ ಅಧ್ಯಕ್ಷೆ ಎಂದು ತಿಳಿದುಬಂದಿದೆ. ಹೀಗಾಗಿ, ಶಿಲ್ಪಾ ಶೆಟ್ಟಿಗೆ ನಾವು ನೋಟೀಸ್ ಕೊಟ್ಟಿದ್ದೇವೆ. ಪ್ರಕರಣ ಸಂಬಂಧ ಅವರ ವಿವರಣೆಯನ್ನು ತಿಳಿಸಲು ಸೂಚಿಸಿದ್ದೇವೆ' ಎಂದು ಲಕ್ನೋ ಪೊಲೀಸ್ ಆಯುಕ್ತ ಡಿಕೆ ಠಾಕೂರ್ ಹೇಳಿದ್ದಾರೆ.

ಶಿಲ್ಪಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ, ಸೋಷಿಯಲ್ ಮೀಡಿಯಾದಲ್ಲಿ ಕಿರಣ್ ಬಾವಾ ಪೋಸ್ಟ್ ಹಾಕಿದ್ದಾರೆ. ವೆಲ್‌ನೆಸ್ ಸೆಂಟರ್‌ಗೂ ಶಿಲ್ಪಾ ಶೆಟ್ಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಕಿರಣ್ ಬಾವಾ ತಿಳಿಸಿದ್ದಾರೆ.

ಐಒಎಸ್ ಐಎಸ್ ಸ್ಪಾ ಮತ್ತು ವೆಲ್‌ನೆಸ್ ಪ್ರೈವೇಟ್ ಲಿಮಿಟೆಡ್‌ನ ಚೇರ್ ಪರ್ಸನ್ ಆಗಿ, ಜವಾಬ್ದಾರಿಯುತ ವ್ಯಕ್ತಿಯಾಗಿ ನಾನು ಈ ಪೋಸ್ಟ್ ಮಾಡುತ್ತಿದ್ದೇನೆ. ಐಒಎಸ್ ಐಎಸ್ ಗೂ ಶಿಲ್ಪಾ ಶೆಟ್ಟಿ ಮತ್ತು ತಾಯಿ ಸುನಂದಾ ಶೆಟ್ಟಿಗೂ ಯಾವುದೇ ಸಂಬಂಧ ಇಲ್ಲ. ಐಒಎಸ್ ಐಎಸ್ ನಿಂದ ಅವರು ಬಹಳ ಹಿಂದೆಯೇ ದೂರಾದರು'' ಎಂದು ಕಿರಣ್ ಬಾವಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!