ಅರ್ಮಾನ್ ಕೊಹ್ಲಿ 
ಬಾಲಿವುಡ್

ಡ್ರಗ್ಸ್ ಕೇಸ್: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಬಂಧನ

ಮನೆಯಲ್ಲಿ ಡ್ರಗ್ಸ್ ಪತ್ತೆಯಾದ ಬೆನ್ನಲ್ಲೇ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರನ್ನು ಎನ್'ಸಿಬಿ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಮುಂಬೈ: ಮನೆಯಲ್ಲಿ ಡ್ರಗ್ಸ್ ಪತ್ತೆಯಾದ ಬೆನ್ನಲ್ಲೇ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರನ್ನು ಎನ್'ಸಿಬಿ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ನಿನ್ನೆಯಷ್ಟೇ ಅರ್ಮಾನ್ ಕೊಹ್ಲಿ ಅವರ ಮುಂಬೈ ನಿವಾಸದ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ದಾಳಿ ನಡೆಸಿತ್ತು. ದಾಳಿ ವೇಲೆ ಅರ್ಮಾನ್ ಕೊಹ್ಲಿ ಅವರ ನಿವಾಸದಲ್ಲಿ ಸಣ್ಣ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ನಟ ಅರ್ಮಾನ್ ಕೊಡ್ಹಿ ಹಾಗೂ ಡ್ರಗ್ ಪೆಡ್ಲರ್ ಅಜಯ್ ರಾಜು ಅವರನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು, ಇಬ್ಬರ ವಿರುದ್ಧ ಎನ್'ಡಿ'ಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 

‘ಶುಕ್ರವಾರವಷ್ಟೇ ಕಿರುತೆರೆ ನಟ ಗೌರವ್ ದೀಕ್ಷಿತ್ ಅವರನ್ನು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳ ಬಂಧಿಸಿತ್ತು. ಇದರ ಮುಂದುವರಿದ ಭಾಗವಾಗಿ ನಿನ್ನೆ ಅರ್ಮಾನ್ ಕೊಹ್ಲಿ ಅವರ ನಿವಾಸದ ಮೇಲೆ ದಾಳಿ ನಡೆದಿತ್ತು. 

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ನಂತರ ಎನ್‌ಸಿಬಿಯು ಸಿನಿಮಾ ಮತ್ತು ಕಿರುತೆರೆಯ ಕೆಲ ಸೆಲೆಬ್ರಿಟಿಗಳು ಮಾದಕ ವಸ್ತು ಬಳಸುತ್ತಿರುವ ಬಗ್ಗೆ ತನಿಖೆ ಕೈಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT