ಕತ್ರಿನಾ ಕೈಫ್, ವಿಕ್ಕಿ ಕೌಶಲ್ 
ಬಾಲಿವುಡ್

ಬಾಲಿವುಡ್ ತಾರಾ ಜೋಡಿ ಕತ್ರಿನಾ ಕೈಫ್- ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಪ್ರವೇಶ

ಬಾಲಿವುಡ್ ತಾರಾ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಮುಂಬೈ: ಬಾಲಿವುಡ್ ತಾರಾ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರಾಜಸ್ಥಾನದ ಬರ್ವಾರ ಕೋಟೆಯ ಸಿಕ್ಸ್ ಸೆನ್ಸ್ ಅರಮನೆಯಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಸತಿ-ಪತಿಗಳಾದರು ಎಂದು ಆಪ್ತ ಮೂಲಗಳು ತಿಳಿಸಿವೆ.

ಡಿಸೆಂಬರ್ 7 ರಂದು ಮೆಹಂದಿ ಕಾರ್ಯಕ್ರಮದೊಂದಿಗೆ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಿದ್ದವು. ತದನಂತರ ಡಿಸೆಂಬರ್ 9 ರಂದು ಪಂಜಾಬಿ ಸಂಗೀತ ರಸ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 

ಕಬೀರ್ ಖಾನ್, ಗುರುದಾಸ್ ಮನ್, ವಿಜಯ್ ಕೃಷ್ಣ ಆಚಾರ್ಯ ಸೇರಿದಂತೆ ಹಲವು ಬಾಲಿವುಡ್ ನಟ, ನಟಿಯರು, ಗಣ್ಯರು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗಿ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!