ಕಂಗನಾ ರಣಾವತ್, ಜಾವೇದ್ ಅಖ್ತರ್ 
ಬಾಲಿವುಡ್

ಕಂಗನಾ ವಿರುದ್ದ ಜಾಮೀನು ರಹಿತ ವಾರೆಂಟ್ ಕೋರಿ ಜಾವೇದ್ ಅಖ್ತರ್ ಅರ್ಜಿ ಸಲ್ಲಿಕೆ

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಆಕೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಖ್ಯಾತ ಕಥೆಗಾರ, ಗೀತೆ ರಚನೆಕಾರ ಜಾವೇದ್ ಅಖ್ತರ್ ಸೋಮವಾರ ನ್ಯಾಯಾಲಯವೊಂದರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಖ್ತರ್ ಪರ ವಕೀಲ ಜಯ್ ಭಾರದ್ವಾಜ್ ಸಲ್ಲಿಸಿರುವ ಅರ್ಜಿಯಲ್ಲಿ, ಈ ವರ್ಷದ ಮಾರ್ಚ್ ನಿಂದ ಒಂದಲ್ಲಾ ಒಂದು ಕಾರಣಕ್ಕಾಗಿ ರಣಾವತ್ ಕೋರಿರುವ ವಿನಾಯಿತಿಗಳ ಪಟ್ಟಿಯನ್ನು ನೀಡಿದ್ದಾರೆ. ಸೆಪ್ಟೆಂಬರ್ 20 ರಂದು ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್ ಆರ್ ಖಾನ್ ಎದುರು ಕಂಗನಾ ಕೊನೆಯ ಬಾರಿಗೆ ವಿಚಾರಣೆಗೆ ಹಾಜರಾಗಿದ್ದರು.

ಈ ವಿಚಾರದಲ್ಲಿ ವಿನಾಕಾರಣ ವಿಳಂಬ ಮಾಡಲು ಎಲ್ಲಾ ರೀತಿಯ ತಂತ್ರಗಳನ್ನು ಅವರು ಅನುಸರಿಸಿದ್ದಾರೆ. ನ್ಯಾಯಾಲಯದ ಮುಂದೆ ಸುಳ್ಳು, ಸರಿಯಾಗಿಇಲ್ಲದ ಹೇಳಿಕೆಗಳನ್ನು ಅವರು ನೀಡಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

ಈ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸದ ನ್ಯಾಯಾಲಯ, ಮುಂದಿನ ವಿಚಾರಣೆ ಜನವರಿ 4 ರೊಳಗೆ ವಿವರಣೆ ನೀಡುವಂತೆ ಕಂಗನಾ ಪರ ವಕೀಲರಿಗೆ ಸೂಚಿಸಿದೆ. ಮುಂದಿನ ವಿಚಾರಣೆ ವೇಳೆ ಕಂಗನಾ ಹಾಜರಾತಿಯನ್ನು ಖಾತ್ರಿಪಡಿಸುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಇದಕ್ಕೂ ಮುನ್ನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸ್ಥಳಾಂತರಿಸಲು ಕೋರಿ ರಣಾವತ್ ಸಲ್ಲಿಸಿದ ಅರ್ಜಿಯನ್ನು ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದರು. 

ಟಿವಿ ಸಂದರ್ಶನವೊಂದರಲ್ಲಿ ರಣಾವತ್ ತಮ್ಮ ವಿರುದ್ಧ ಮಾನಹಾನಿಕಾರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಳೆದ ವರ್ಷ ನವೆಂಬರ್ ನಲ್ಲಿ ಅಖ್ತರ್ ಅಂಧೇರಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT