ಕರೀನಾ ಕಪೂರ್, ಅಮೃತಾ ಅರೋರಾಗೆ ಕೋವಿಡ್ ಪಾಸಿಟಿವ್ ದೃಢ
ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಖಾನ್ ಮತ್ತು ಅಮೃತಾ ಅರೋರಾರಿಗೆ ಮಂಗಳವಾರ ಕೋವಿಡ್-19 ದೃಢಪಟ್ಟಿದೆ.
ಮುಂಬೈ: ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಖಾನ್ ಮತ್ತು ಅಮೃತಾ ಅರೋರಾರಿಗೆ ಮಂಗಳವಾರ ಕೋವಿಡ್-19 ದೃಢಪಟ್ಟಿದೆ.
ಈ ಇಬ್ಬರು ನಟಿಯರ ಸಂಪರ್ಕಕ್ಕೆ ಬಂದ ವ್ಯಕ್ತಿಗಳೆಲ್ಲರೂ ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಬೇಕು ಎಂದು ಮುಂಬೈನ ನಾಗರಿಕ ಸಂಸ್ಥೆ ಬೃಹನ್‍ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ. ಕಳೆದ ವಾರ ಮುಂಬೈನಲ್ಲಿ ಅನಿಲ್ ಕಪೂರ್ ಪುತ್ರಿ ರಿಯಾ ಕಪೂರ್ ಆಯೊಜಿಸಿದ್ದ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂಬುದು ಇನ್‍ಸ್ಟಾಗ್ರಾಮ್ ಖಾತೆಯಿಂದ ತಿಳಿದು ಬಂದಿದೆ.
“ನಾವು ಅವರನ್ನು (ಕಪೂರ್ ಮತ್ತು ಅರೋರಾ) ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ಕೇಳಿಕೊಂಡಿದ್ದೇವೆ. ಅವರ ಎಲ್ಲಾ ನಿಕಟ ಸಂಪರ್ಕಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ ಎಂದು ಆರೋಗ್ಯದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ಸುರೇಶ್ ಕಾಕಾನಿ ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.