ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ 
ಬಾಲಿವುಡ್

ನೀಲಿ ಚಿತ್ರಗಳ ನಿರ್ಮಾಣ ಪ್ರಕರಣ: ಕ್ರೈಮ್ ಬ್ರಾಂಚ್ ಪೊಲೀಸರಿಂದ ಶಿಲ್ಪಾಶೆಟ್ಟಿಗೆ ಇನ್ನೂ ಸಿಕ್ಕಿಲ್ಲ ಕ್ಲೀನ್ ಚಿಟ್!

ಉದ್ಯಮಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ನಟಿ ಶಿಲ್ಪಾಶೆಟ್ಟಿಗೆ ಇನ್ನೂ ಕ್ಲಿನ್ ಚೀಟ್ ಸಿಕ್ಕಿಲ್ಲ ಎಂದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಮುಂಬೈ: ಉದ್ಯಮಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ನಟಿ ಶಿಲ್ಪಾಶೆಟ್ಟಿಗೆ ಇನ್ನೂ ಕ್ಲಿನ್ ಚೀಟ್ ಸಿಕ್ಕಿಲ್ಲ ಎಂದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಮಂಗಳವಾರ ಹೇಳಿದ್ದಾರೆ.

ಈ ಕೇಸ್ ನಲ್ಲಿ ತೊಡಗಿಸಿಕೊಂಡಿರುವ ಎಲ್ಲಾರ ಖಾತೆಗಳ ವ್ಯವಹಾರ ವಿಚಾರಣೆಗಾಗಿ ವಿಧಿವಿಜ್ಞಾನ ಲೆಕ್ಕ ಪರಿಶೋಧಕರು ನೇಮಕ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ.

 ಶಿಲ್ಪಾಶೆಟ್ಟಿಗೆ ಇನ್ನೂ ಕ್ಲೀನ್ ಚಿಟ್ ನೀಡಿಲ್ಲ. ಎಲ್ಲಾ ರೀತಿಯ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಎಲ್ಲಾ ಖಾತೆಗಳ ವ್ಯವಹಾರ ಪರಿಶೀಲಿಸಲು ಲೆಕ್ಕ ಪರಿಶೋಧಕರನ್ನು ನೇಮಕ ಮಾಡಲಾಗಿದೆ. ಅಡಿಟ್ ಗೆ ಸ್ವಲ್ಪ ಸಮಯ ಬೇಕಾಗಲಿದೆ. ಅದೊಂದು ಧೀರ್ಘ ಪ್ರಕ್ರಿಯೆಯಾಗಿದೆ. ಆದರೆ, ಆಡಿಟ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾರಿಗೂ ಕ್ಲೀನ್ ಚಿಟ್ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸಾಕ್ಷಿದಾರರಾಗಿ ಹೇಳಿಕೆ ನೀಡಲು ಶೆರ್ಲಾನ್ ಚೋಪ್ರಾ ಅವರನ್ನು ವಿಚಾರಣೆ ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ