ನಟ ಕರಣ್ ಮೆಹ್ರಾ ಬಂಧನ 
ಬಾಲಿವುಡ್

ಪತ್ನಿ ಮೇಲೆ ಹಲ್ಲೆ ಆರೋಪ: ಖ್ಯಾತ ಕಿರುತೆರೆ ನಟ ಕರಣ್‌ ಮೆಹ್ರಾ ಬಂಧನ, ಬಿಡುಗಡೆ

ಪತ್ನಿಯನ್ನು ಥಳಿಸಿದ ಆರೋಪದ ಮೇಲೆ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್ ಮೆಹ್ರಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮುಂಬೈ: ಪತ್ನಿಯನ್ನು ಥಳಿಸಿದ ಆರೋಪದ ಮೇಲೆ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್ ಮೆಹ್ರಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಮಂಗಳವಾರ ಮುಂಜಾನೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಕಿರುತೆರೆ ನಟರಾಗಿರುವ ಪತ್ನಿ ನಿಶಾ ರಾವಲ್ ಮತ್ತು ಕರಣ್ ನಡುವೆ ಜಗಳ ನಡೆದಿದ್ದು, ನಂತರ ಕರಣ್ ವಿರುದ್ಧ ಪೊಲೀಸ್‌ಗೆ ದೂರು ನೀಡಿದ್ದರು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆಯ ಬಗ್ಗೆ ಗೋರೆಗಾಂವ್ ಪೊಲೀಸರಿಗೆ ತಮ್ಮ ನಿಯಂತ್ರಣ ಕೊಠಡಿಯಿಂದ ಕರೆ ಬಂದಿದ್ದು,  ಕೂಡಲೇ ಮನೆಗೆ ತೆರಳಿದ ಪೊಲೀಸರು ಕರಣ್ ರನ್ನು ವಶಕ್ಕೆ ಪಡೆದಿದ್ದರು. ಕರಣ್ ವಿರುದ್ಧ ಐಪಿಸಿ ಸೆಕ್ಷನ್, 336, 337, 332, 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಮಂಗಳವಾರ ಮುಂಜಾನೆ ಅವರನ್ನು ಪೊಲೀಸ್ ಠಾಣೆಯಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು  ಅಧಿಕಾರಿ ತಿಳಿಸಿದ್ದಾರೆ.

ಕರಣ್ ಮೆಹ್ರಾ ಅವರು ಹಿಂದಿಯ ಜನಪ್ರಿಯ ಧಾರಾವಾಹಿ ‘ಯೆ ರಿಷ್ತಾ ಕ್ಯಾ ಕೆಹ್ಲತಾ ಹೈ ಧಾರಾವಾಹಿಯಲ್ಲಿ ನಟಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ