ಚಿತ್ರದ ಸ್ಟಿಲ್ - ಪೂಜೆ 
ಬಾಲಿವುಡ್

ಅಯೋಧ್ಯೆಯ ರಾಮ ಲಲ್ಲಾ ದೇಗುಲದಲ್ಲಿ “ರಾಮ್ ಸೇತು” ಚಿತ್ರಕ್ಕೆ ಮುಹೂರ್ತ

ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಶ್ರತ್ ಭರೂಚಾ ಅವರು ತಮ್ಮ ಮುಂಬರುವ ಚಿತ್ರ ‘ರಾಮ್ ಸೇತು’ ಮುಹೂರ್ತದಂದು ಗುರುವಾರ ರಾಮಜನ್ಮಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಅಯೋಧ್ಯಾ/ಲಖನೌ: ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಶ್ರತ್ ಭರೂಚಾ ಅವರು ತಮ್ಮ ಮುಂಬರುವ ಚಿತ್ರ ‘ರಾಮ್ ಸೇತು’ ಮುಹೂರ್ತದಂದು ಗುರುವಾರ ರಾಮಜನ್ಮಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಾಲಿವುಡ್ ನಟರನ್ನು ರಾಜ ಅಯೋಧ್ಯ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಮತ್ತು ಅವರ ಪುತ್ರ ಯತೀಂದ್ರ ಮಿಶ್ರಾ ಅವರು ಸ್ಮರಣಿಕೆ ಮತ್ತು ಶಾಲು ನೀಡುವ ಮೂಲಕ ಸ್ವಾಗತಿಸಿದರು.

ನಂತರ ರಾಮ್ ಸೇತು ತಂಡವು ಲಖನೌ ತಲುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ನೋಯ್ಡಾದಲ್ಲಿ ನಿರ್ಮಾಣವಾಗಲಿರುವ ಚಲನಚಿತ್ರ ಸಂಸ್ಥೆ ಮತ್ತು ಚಲನಚಿತ್ರಗಳಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಿದರು. ಅಯೋಧ್ಯೆಯ ರಾಮ್ ಲಲ್ಲಾ ದೇವಾಲಯದ ಆವರಣದಲ್ಲಿ, ರಾಮ್ ಸೇತು ಚಿತ್ರದ ಮುಹೂರ್ತ ನೆರವೇರಿಸಲಾಯಿತು.

ಅಯೋಧ್ಯೆಯಲ್ಲಿ ನೆರವೇರಿಸಲಾದ ಪೂಜೆಯ ಫೋಟೋವನ್ನು ನಟ ಅಕ್ಷಯ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ನಿರ್ದೇಶನದ ‘ರಾಮ್ ಸೇತು’ ಚಿತ್ರವನ್ನು ಅಕ್ಷಯ್ ಅವರ ಕೇಪ್ ಆಫ್ ಗುಡ್ ಫಿಲ್ಮ್ಸ್, ಅಬುಂಡಾಂಟಿಯಾ ಎಂಟರ್ಟೈನ್ಮೆಂಟ್, ಲೈಕಾ ಪ್ರೊಡಕ್ಷನ್ಸ್ ಮತ್ತು ಪ್ರೈಮ್ ವಿಡಿಯೋ ನಿರ್ಮಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT