ಪರೇಶ್ ರಾವಲ್ 
ಬಾಲಿವುಡ್

ಸಾವಿನ ವದಂತಿ: ತಮ್ಮದೇ ಹಾಸ್ಯ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಬಾಲಿವುಡ್ ಖ್ಯಾತ ನಟ ಪರೇಶ್ ರಾವಲ್

ನಟ ಪರೇಶ್ ರಾವಲ್ ವಿಧಿವಶರಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಗಮನಿಸಿದ ಪರೇಶ್ ರಾವಲ್ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈ: ನಟ ಪರೇಶ್ ರಾವಲ್ ವಿಧಿವಶರಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಗಮನಿಸಿದ ಪರೇಶ್ ರಾವಲ್ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಹಾಮಾರಿ ಕೊರೋನಾ ಸಾಕಷ್ಟು ಸೆಲೆಬ್ರಿಟಿಗಳನ್ನು ಬಲಿಪಡೆದುಕೊಳ್ಳುತ್ತಿದೆ. ಸಾಂಕ್ರಾಮಿಕ ರೋಗ ಪರಿಣಾಮ ಪ್ರತೀನಿತ್ಯ ಕೆಟ್ಟ ಸುದ್ದಿಗಳನ್ನೇ ಕೇಳುವಂತಾಗಿದೆ. ಆದರೆ, ಈ ಸಂದರ್ಭವನ್ನು ಕೆಲವು ಕಿಡಿಕೇಡಿಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಲೈಕ್ ಹಾಗೂ ಫಾಲೋವರ್ಸ್ ಗಳನ್ನು ಪಡೆಯುವ ಸಲುವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇದಕ್ಕಾಗಿ ಸೆಲೆಬ್ರಿಟಿಗಳ ನಿಧನದ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಬಾಲಿವುಡ್ ನಟ ಲಕ್ಕಿ ಅಲಿ ನಿಧನ ಕುರಿತ ವದಂತಿ ಬಳಿಕ ಇದೀಗ ಬಾಲಿವುಡ್ ಖ್ಯಾತ ನಟ ಪರೇಶ್ ರಾವಲ್ ನಿಧನ ಕುರಿತಂತೆಯೂ ವದಂತಿಗಳು ಹಬ್ಬಿದೆ. 

ತಮ್ಮ ಸಾವಿನ ವದಂತಿಯ ಬಗ್ಗೆ ಹಾಸ್ಯ ಮಿಶ್ರಿತವಾಗಿ ಟ್ವೀಟ್ ಮಾಡಿರುವ ಪರೇಶ್ ರಾವಲ್ ಅವರು, ನಾನು 7 ಗಂಟೆ ಸುಮಾರಿಗೆ ನಿದ್ದೆ ಮಾಡಿದ್ದೆ. ನೀವು ತಪ್ಪಾಗಿ ಭಾವಿಸಿದ್ದೀರಾ.. ಕ್ಷಮೆ ಇರಲಿ ಎಂದು ಹೇಳಿದ್ದಾರೆ. 

ಈ ಹಿಂದೆ ಕನ್ನಡದ ಖ್ಯಾತ ಹಾಸ್ಯ ನಟ ದೊಡ್ಡಣ್ಣ ಅವರ ಬಗ್ಗೆಯೂ ಇಂತಹದ್ದೇ ವದಂತಿ ಹರಿದಾಡಿತ್ತು. ಬಳಿಕ ದೊಡ್ಡಣ್ಣ ಅವರೇ ವಿಡಿಯೋ ಮಾಡಿ, ''ವದಂತಿಗಳನ್ನು ಹಬ್ಬಿಸಿಬೇಡಿ, ನಾನು ಆರೋಗ್ಯವಾಗಿದ್ದೇನೆ'' ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT