ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಗೆ ಕೋವಿಡ್ ಪಾಸಿಟಿವ್
ಬಾಲಿವುಡ್ ನಟಿ ಹಾಗೂ ರಂಗೀಲಾ ಬೆಡಗಿ ಖ್ಯಾತಿಯ ಊರ್ಮಿಳಾ ಮಾತೋಂಡ್ಕರ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಅವರು ಮನೆ ಆರೈಕೆಯಲ್ಲಿ ಇದ್ದಾರೆ.
ಬಾಲಿವುಡ್ ನಟಿ ಹಾಗೂ ರಂಗೀಲಾ ಬೆಡಗಿ ಖ್ಯಾತಿಯ ಊರ್ಮಿಳಾ ಮಾತೋಂಡ್ಕರ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಅವರು ಮನೆ ಆರೈಕೆಯಲ್ಲಿ ಇದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್ ದೃಢಪಟ್ಟಿದ್ದು ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸದ್ಯ ನಾನು ಮನೆ ಆರೈಕೆಯಲ್ಲಿ ಕ್ಷೇಮವಾಗಿದ್ದೇನೆ, ಯಾವುದೇ ಭಯ ಬೇಡ, ನೀವು ಸಹ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.