ರಾಮ್ ಗೋಪಾಲ್ ವರ್ಮಾ 
ಬಾಲಿವುಡ್

ಸಂಭ್ರಮಿಸಬೇಕಾಗಿರುವುದು ಮದುವೆಯನ್ನಲ್ಲ, ವಿಚ್ಛೇದನವನ್ನು: ರಾಮ್ ಗೋಪಾಲ್ ವರ್ಮಾ ಟ್ವೀಟ್

ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಇಂದು ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಈ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮದೇ ಸ್ಟೈಲಿನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಇಂದು ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಈ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮದೇ ಸ್ಟೈಲಿನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

ಸದಾ ತಮ್ಮ ನೇರ ನುಡಿಗಳಿಗೆ ಹೆಸರಾಗಿರುವ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈಗ ದಕ್ಷಿಣ ಭಾರತದ ತಾರೆಯರಾದ ಸಮಂತಾ ಅಕ್ಕಿನೇನಿ ಹಾಗೂ ನಾಗಚೈತನ್ಯ ಡೈವೋರ್ಸ್ ನೀಡಿರುವ ಬೆನ್ನಲ್ಲೇ ತಮ್ಮದೇ ಸ್ಟೈಲ್ ನಲ್ಲಿ ಟ್ವೀಟ್ ಮಾಡಿರುವ ಅವರು ಸಂಭ್ರಮಿಸಬೇಕಾಗಿರುವುದು ಮದುವೆಗಳನ್ನಲ್ಲ, ವಿಚ್ಚೇದನಗಳನ್ನು ಎಂದು ಟ್ವೀಟ್ ಮಾಡಿದ್ದಾರೆ.

ಅವರು ಇನ್ನೂ ಮುಂದುವರೆದು ಮದುವೆಗಳು ಸಾವಿದ್ದಂತೆ ಆದರೆ ವಿಚ್ಚೇದನ ಒಂದು ರೀತಿ ಪುನರ್ಜನ್ಮ ಇದ್ದಂತೆ ಎಂದು ಅವರು ಹೇಳಿದ್ದಾರೆ. ಸಮಂತಾ ಅಕ್ಕಿನೇನಿ ಮತ್ತು ನಾಗ ಚೈತನ್ಯ ಪರಸ್ಪರ ಒಪ್ಪಿಗೆ ಮೇರೆಗೆ ತಮ್ಮ ವಿಚ್ಚೇದನವನ್ನು ಅಧಿಕೃತವಾಗಿ ಧೃಡಪಡಿಸಿಕೊಂಡ ಬೆನ್ನಲ್ಲೇ ಈಗ ರಾಮ್ ಗೋಪಾಲ್ ವರ್ಮಾ ಅವರ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಮದುವೆಗಳನ್ನು ಅಲ್ಲ, ಬದಲಾಗಿ ಡಿವೋರ್ಸ್‍ಗಳನ್ನು ಸಂಭ್ರಮಿಸಬೇಕಾದ ಪರಿಸ್ಥಿತಿ ಬಂದಿದೆ. ಮದುವೆಗಳು ಸಾವಿದ್ದಂತೆ, ಡಿವೋರ್ಸ್ ಪುನರ್ಜನ್ಮ ಇದ್ದಂತೆ. ಮದುವೆಗಳು ನರಕದಲ್ಲಿ ಹಾಗೂ ಡಿವೋರ್ಸ್ ಗಳು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತವೇ ಎಂದು ತಮ್ಮದೇ ಶೈಲಿಯಲ್ಲಿ ನಿರ್ದೇಶಕರು ಬರೆದುಕೊಂಡಿರುವುದು ಎಲ್ಲರ ಗಮನ ಸೆಳೆದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!