ಅನನ್ಯಾ ಪಾಂಡೆ 
ಬಾಲಿವುಡ್

ಕ್ರೂಸ್ ಡ್ರಗ್ಸ್ ಪ್ರಕರಣ: ನಟಿ ಅನನ್ಯಾ ಪಾಂಡೆ ಇಂದು ಎನ್‌ಸಿಬಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ

ಕ್ರೂಸ್ ಡ್ರಗ್ಸ್ ಪಾರ್ಟಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಬಾಲಿವುಡ್ ನಟಿ ಹಾಗೂ ನಟ ಚಂಕಿ ಪಾಂಡೆಯವರ ಪುತ್ರಿ ಅನನ್ಯಾ ಪಾಂಡೆ ಅವರು ಸೋಮವಾರ ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ

ಮುಂಬೈ: ಕ್ರೂಸ್ ಡ್ರಗ್ಸ್ ಪಾರ್ಟಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಬಾಲಿವುಡ್ ನಟಿ ಹಾಗೂ ನಟ ಚಂಕಿ ಪಾಂಡೆಯವರ ಪುತ್ರಿ ಅನನ್ಯಾ ಪಾಂಡೆ ಅವರು ಸೋಮವಾರ ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ.

ಸೋಮವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ಅನನ್ಯಾ ಪಾಂಡೆ ಅವರಿಗೆ ನೋಟಿಸ್ ನೀಡಿತ್ತು. ಆದರೆ ಕೆಲವು ವೈಯಕ್ತಿಕ ಬದ್ಧತೆಗಳಿಂದಾಗಿ ಇಂದು ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ.

ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವಿಚಾರಣೆಗೆ ಮತ್ತೊಂದು ದಿನಾಂಕ ನೀಡುವಂತೆ ನಟಿ ಅನನ್ಯಾ ಎನ್ ಸಿಬಿಗೆ ಮನವಿ ಮಾಡಿದ್ದರು. ಅವರ ಮನವಿಯನ್ನು ಎನ್ ಸಿಬಿ ಪುರಸ್ಕರಿಸಿದೆ ಮತ್ತು ಹೊಸದಾಗಿ ಸಮನ್ಸ್‌ ನೀಡುವುದಾಗಿ ಹೇಳಿದೆ.

ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಬಿ ಶುಕ್ರವಾರ ಎರಡನೇ ಬಾರಿಗೆ ಅನನ್ಯಾ ಪಾಂಡೆ ಅವರನ್ನು ವಿಚಾರಣೆ ಒಳಪಡಿಸಿತ್ತು. 

ಪ್ರಕರಣ ಸಂಬಂಧ ಅಕ್ಟೋಬರ್ 2ರಂದು ಬಂಧನಕ್ಕೊಳಗಾದ ಆರ್ಯನ್ ಖಾನ್ ಅವರ ಫೋನಿನಲ್ಲಿ ಪತ್ತೆಯಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಟಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಆರ್ಯನ್ ಖಾನ್ ಡ್ರಗ್ಸ್ ಸಂಗ್ರಹಿಸಲು ನಟಿ ಅನನ್ಯಾ ಸಹಾಯ ಮಾಡಿದ್ದಾರೆ ಎಂದು ಎನ್‌ಸಿಬಿ ಹೇಳಿದೆ. ಆದರೆ ಡ್ರಗ್ಸ್ ಪೂರೈಸಿದ ಅಥವಾ ಬಳಸಿದ ಆರೋಪವನ್ನು ಅನನ್ಯಾ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel