ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಜಿಮ್ ಮಾಡುತ್ತಿದ್ದ ವೇಳೆ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು!

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಬಾಲಿವುಡ್ ನ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವ ಅವರಗೆ ಇಂದು ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜು ಶ್ರೀವಾತ್ಸವ
Vishwanath S
Updated On : 10 Aug 2022, 4:09 pm

ನವದೆಹಲಿ: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಬಾಲಿವುಡ್ ನ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವ ಅವರಗೆ ಇಂದು ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ದೆಹಲಿಯ ಎಐಐಎಂಎಸ್ ಆಸ್ಪತ್ರೆಗೆ ನಟನನ್ನು ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತ ಆಗಿರುವುದು ಖಡಿತಪಡಿಸಿದ ವೈದ್ಯರು ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದೆ. ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ. 

1980ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ 58 ವರ್ಷದ ರಾಜು ಅವರು, ಮೈನೆ ಪ್ಯಾರ್ ಕಿಯಾ, ಬಾಜಿಗರ್, ಬಾಂಬೈ ಟು ಗೋವಾ ಮತ್ತು ಆಮದಾನಿ ಅತ್ಠಾನಿ ಖರ್ಚ ರುಪಯ್ಯಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ ಅವರು ಹಿಂದಿಯ ಬಿಗ್ ಬಾಸ್ 3ನೇ ಆವೃತ್ತಿಯಲ್ಲೂ ಭಾಗವಹಿಸಿದ್ದರು.

Advertisement

Advertisement

ಸದ್ಯ ರಾಜು ಶ್ರೀವಾತ್ಸವ ಅವರು ಉತ್ತರಪ್ರದೇಶದ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments