ರಾಜು ಶ್ರೀವಾಸ್ತವ 
ಬಾಲಿವುಡ್

ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ

ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ.

ನವದೆಹಲಿ: ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ.

ಹಾಸ್ಯನಟ ರಾಜು ಶ್ರೀವಾಸ್ತವ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದರು. ಇದೀಗ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದ್ದು, ಅವರು ಕ್ಲಿನಿಕಲ್ ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರಾಜು ಶ್ರೀವಾಸ್ತವ ಅವರು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಮ್ಸ್ ನಿರ್ದೇಶಕರೊಂದಿಗೆ ಫೋನ್ ಮೂಲಕ ಸಂಭಾಷಣೆ ನಡೆಸಿ, ರಾಜು ಅವರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಹಾಸ್ಯನಟ ರಾಜು ಶ್ರೀವಾಸ್ತವ್ ಅವರ ಪತ್ನಿ ಶಿಖಾ ಶ್ರೀವಾಸ್ತವ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!