ನೋರಾ ಫತೇಹಿ 
ಬಾಲಿವುಡ್

ಸುಕೇಶ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಮುಂದೆ ವಿಚಾರಣೆಗೆ ನಟಿ ನೋರಾ ಫತೇಹಿ ಹಾಜರು

200 ಕೋಟಿ ಸುಲಿಗೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು...

ನವದೆಹಲಿ: 200 ಕೋಟಿ ಸುಲಿಗೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಮತ್ತು ಸಹಚರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

30 ವರ್ಷದ ನೋರಾ ಫತೇಹಿ ಅವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿದ್ದು, ಇಂದು ಸಹ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಚಂದ್ರಶೇಖರ್ ಅವರೊಂದಿಗಿನ ನಂಟಿನ ಬಗ್ಗೆ ಬಾಲಿವುಡ್ ನಟಿಯನ್ನು ವಿಚಾರಣೆ ನಡೆಸಲಾಗುವುದು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ)ಯ ಸೆಕ್ಷನ್‌ಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನ್ನ ಹಿಂದಿನ ಚಾರ್ಜ್ ಶೀಟ್‌ಗಳಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಿದ್ದು, ಫತೇಹಿ ಅವರ ಹೇಳಿಕೆಯನ್ನು ಅದೇ ಪ್ರಾಸಿಕ್ಯೂಷನ್ ದೂರಿನಲ್ಲಿ ಸೇರಿಸಲಾಗಿದೆ.

2021ರಲ್ಲಿ ಸುಕೇಶ್ ಚಂದ್ರಶೇಖರ್ ಅವರಿಂದ ನೋರಾ ಫತೇಹಿ ಅವರ ಸೋದರ ಮಾವ ಬಿಎಂಡಬ್ಲ್ಯು ಕಾರು ಪಡೆದಿದ್ದರು ಎಂದು ಈ ಹಿಂದೆ ವಿಶೇಷ ಪೊಲೀಸ್ ಆಯುಕ್ತ ರವೀಂದರ್ ಯಾದವ್ ಅವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್