ಬಾಲಿವುಡ್ ನಟಿ ಉರ್ಫಿ ಜಾವೇದ್ 
ಬಾಲಿವುಡ್

ಸೀರೆಯುಟ್ಟು ಏರ್‌ ಪೋರ್ಟ್ ನಲ್ಲಿ ಕಾಣಿಸಿಕೊಂಡ ಹಾಟ್ ಬೆಡಗಿ ಉರ್ಫಿ ಜಾವೇದ್: ಅಸಭ್ಯ ವರ್ತನೆ, ದೂರು ದಾಖಲು

ವಿಚಿತ್ರ ರೀತಿಯ ಉಡುಗೆಯಿಂದ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ಬೆಡಗಿ ಉರ್ಫಿ ಜಾವೇದ್ ಇದೀಗ ಸೀರೆಯುಟ್ಟು  ಪಬ್ಲಿಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮೈ ಮೇಲೆ ನಿಲ್ಲದ  ಸೀರೆಯ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಟೀಕಿಸುತ್ತಿದ್ದಾರೆ.

ವಿಚಿತ್ರ ರೀತಿಯ ಉಡುಗೆಯಿಂದ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ಬೆಡಗಿ ಉರ್ಫಿ ಜಾವೇದ್ ಇದೀಗ ಸೀರೆಯುಟ್ಟು  ಪಬ್ಲಿಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮೈ ಮೇಲೆ ನಿಲ್ಲದ  ಸೀರೆಯ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಟೀಕಿಸುತ್ತಿದ್ದಾರೆ.

ವಿಡಿಯೋದಲ್ಲಿ ಉರ್ಫಿ ಜಾವೇದ್, ಹಳದಿ ಬಣ್ಣದ ಸೀರೆ ಹಾಗೂ ಬ್ಲೌಸ್ ನಲ್ಲಿ ಕಾಣಿಸಿಕೊಂಡು ಕ್ಯಾಮರಾಗೆ ಫೋಸ್ ನೀಡಿದ್ದಾರೆ.  ಆಕೆ ವಿಮಾನ ನಿಲ್ದಾಣದೊಳಗೆ ಹೋಗುವಾಗ ಆಕೆಯ ಸೀರೆ ಮೇಲಿನ ಸೆರಗು ಜಾರಿದೆ. ಕೂಡಲೇ ಅದನ್ನು ಸರಿಪಡಿಸಿಕೊಂಡಿದ್ದಾರೆ. ನಂತರ ಆಕೆ ಪಾಪರಾಜಿಗಳಿಗೆ ಫೋಸ್ ನೀಡಿದ್ದು, ಛಾಯಾಗ್ರಾಹಕರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಮಧ್ಯೆ ಮತ್ತೊಂದು ಬಾರಿಯೂ ಕೆಳಗೆ ಬೀಳುತ್ತಿದ್ದ ಸೀರೆಯನ್ನು  ಸರಿಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಪೊಲೀಸರೊಬ್ಬರು ಉರ್ಫಿ ಜಾವೇದ್ ಅವತಾರಗಳನ್ನು ಗಮನಿಸಿದ್ದಾರೆ. ಸೀರೆಯನ್ನು ಸರಿಯಾಗಿ ಧರಿಸದ ಉರ್ಫಿ ಜಾವೇದ್ ವಿರುದ್ಧ ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಮಧ್ಯೆ ಉರ್ಫಿ ಜಾವೇದ್ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾರ್ವಜನಿಕ ಪ್ರದೇಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಉರ್ಫಿ ಜಾವೇದ್ ಅಶ್ಲೀಲವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ವಕೀಲ ಆಲಿ ಕಾಶಿಫ್ ಖಾನ್ ದೇಶ್ ಮುಖ್ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್