ಶಾರೂಕ್ ಖಾನ್ 
ಬಾಲಿವುಡ್

'ಪಠಾಣ್ ಕೂಡ ದೇಶಭಕ್ತ, ಆದರೆ ಆಕ್ಷನ್ ರೀತಿಯಲ್ಲಿ' ಅಭಿಮಾನಿ ಪ್ರಶ್ನೆಗೆ ಶಾರೂಕ್ ಖಾನ್ ಉತ್ತರ

ಬಾಲಿವುಡ್ ಕಿಂಗ್ ಖಾನ್ ಶಾರುಖ್​ ಖಾನ್  ನಟನೆಯ ‘ಪಠಾಣ್’ ಸಿನಿಮಾ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಅನೇಕ ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಬಂದಿದ್ದರು. ನಿನ್ನೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ #AskSrk ಹ್ಯಾಶ್ ಟಾಗ್ ಮೂಲಕ ಅಭಿಮಾನಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದಾರೆ.

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್​ ಖಾನ್  ನಟನೆಯ ‘ಪಠಾಣ್’ ಸಿನಿಮಾ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಅನೇಕ ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಬಂದಿದ್ದರು. ನಿನ್ನೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ #AskSrk ಹ್ಯಾಶ್ ಟಾಗ್ ಮೂಲಕ ಅಭಿಮಾನಿಗಳೊಂದಿಗೆ ವರ್ಚುವಲ್ ಸಂವಾದ ನಡೆಸಿದ್ದಾರೆ.

ಇತ್ತೀಚಿಗಷ್ಟೆ ರಿಲೀಸ್ ಆದ ಪಠಾಣ್ ಚಿತ್ರದ ‘ಬೇಷರಂ​ ರಂಗ್​..’ ಹಾಡು ಕೆಲವರಿಗೆ ಇಷ್ಟವಾದರೇ ಇನ್ನು ಕೆಲವರನ್ನು ಕೆರಳಿಸಿದೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆಯ ಕೆಮಿಸ್ಟ್ರಿ ಇಷ್ಟಪಟ್ಟರೆ ಮತ್ತೆ ಕೆಲವರು ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಣ್ಣದ ಬಿಕಿನಿಗೆ, ಹಾಡಿನಲ್ಲಿ ಧರಿಸಿರುವ ಬಟ್ಟೆ ಅಶ್ಲೀಲವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಚಿತ್ರವನ್ನು ನಿಷೇಧಿಸಬೇಕೆಂದು ಮುಸ್ಲಿಂ ಸಂಘಟನೆಗಳು ಸೇರಿದಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ನಿನ್ನೆ ಟ್ವಿಟರ್‌ನಲ್ಲಿ ನಡೆದ ‘ಆಸ್ಕ್ ಮಿ ಎನಿಥಿಂಗ್’​ ಸೆಷನ್‌ನಲ್ಲಿ ಶಾರುಖ್ ಖಾನ್‌ಗೆ ಒಬ್ಬರು ಅಭಿಮಾನಿಯೊಬ್ಬರು ಈ ಚಿತ್ರ ದೇಶಭಕ್ತಿ ಸಿನಿಮಾವಾಗಿದೆಯಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರ ನೀಡಿದ ಶಾರುಖ್, ‘ಪಠಾಣ್ ಕೂಡ ತುಂಬಾ ದೇಶಪ್ರೇಮಿ, ಆದರೆ ಆಕ್ಷನ್ ರೀತಿಯಲ್ಲಿ’ ಎಂದು ಹೇಳಿದರು. 

ಮೊನ್ನೆ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022 ಭಾಗಿಯಾಗಿದ್ದ ಶಾರುಖ್ ಪಠಾಣ್ ವಿವಾದದ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ಜಗತ್ತು ನಾರ್ಮಲ್ ಆಗಿದೆ. ನಾವೆಲ್ಲರೂ ಸಂತೋಷವಾಗಿದ್ದೇವೆ, ನಾನು ಅತ್ಯಂತ ಸಂತೋಷವಾಗಿದ್ದೇನೆ. ಇಲ್ಲಿ ಸಕಾರಾತ್ಮಕ ಜನರಿದ್ದಾರೆ. ವಿವಿಧ ಜಾತಿ, ಬಣ್ಣ, ಧರ್ಮಗಳ ಜನರು ಪರಸ್ಪರ ಅರಿತುಕೊಳ್ಳಲು ಸಿನಿಮಾ ಉತ್ತಮ ವೇದಿಕೆಯಾಗಿದೆ' ಎಂದು ಹೇಳಿದ್ದರು. 

ಪಠಾಣ್ ಚಿತ್ರದ ಮೇಲೆ ಶಾರೂಕ್ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಲವು ವರ್ಷಗಳಿಂದ ಸೋಲು ಕಂಡಿರುವ ಮತ್ತು ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ಚಿತ್ರರಂಗಕ್ಕೆ ಸಹ ಒಂದು ಹಿಟ್ ಚಿತ್ರ ನೀಡುವ ಅನಿವಾರ್ಯತೆ ಬಂದೊದಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT