ಸುಶಾಂತ್ ಸಿಂಗ್, ಶವಾಗಾರ ಸಿಬ್ಬಂದಿ 
ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ತಿರುವು: ಕೊಲೆ ಎಂದ ಶವಾಗಾರ ಸಿಬ್ಬಂದಿ!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯಲ್ಲಿ, ಅದು ಕೊಲೆ ಎಂದು ಶವ ಪರೀಕ್ಷೆ ಮಾಡಿದ್ದ ಶವಾಗಾರದ ಸಿಬ್ಬಂದಿ ಹೇಳಿದ್ದಾರೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯಲ್ಲಿ, ಅದು ಕೊಲೆ ಎಂದು ಶವ ಪರೀಕ್ಷೆ ಮಾಡಿದ್ದ ಶವಾಗಾರದ ಸಿಬ್ಬಂದಿ ಹೇಳಿದ್ದಾರೆ.

ಸುಶಾಂತ್ ಸಿಂಗ್ 2020ರ ಜೂನ್ 14 ರಂದು ಮುಂಬೈನ ತಮ್ಮ ಫ್ಲಾಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಕೊಲೆ ಮಾಡಲಾಗಿದೆ ಎಂಬ ವಾದಗಳು ಕೇಳಿಬಂದಿದ್ದವು. ಶವ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದ್ದರೂ, ಅದನ್ನು ಕೊಲೆ ಎಂದೇ ಸುಶಾಂತ್ ಸಿಂಗ್ ಕುಟುಂಬಸ್ಥರು ಹೇಳುತ್ತಿದ್ದರು. 

ಇದಕ್ಕೆ ಪುಷ್ಟಿ ನೀಡುವಂತೆ ಮುಂಬೈನ ಕೂಪರ್ ಆಸ್ಪತ್ರೆ ಶವಾಗಾರದ ಸಿಬ್ಬಂದಿ ರೂಪಕುಮಾರ್ ಶಾ ಹೇಳಿಕೆ ನೀಡಿದ್ದಾರೆ. ಸುಶಾಂತ್ ಸಿಂಗ್ ಮೃತದೇಹ ನೋಡಿದಾಗ ಅದರ ಮೇಲೆ ಗಾಯದ ಗುರುತುಗಳಿದ್ದವು. ಈ ವಿಚಾರವನ್ನು ಅಧಿಕಾರಿಗಳಿಗೆ ಹೇಳಿದ್ದೆ. ಆದರೆ, ಅವರು ನನ್ನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ಅವರಿಗೆ ನ್ಯಾಯ ಸಿಗಬೇಕು, ತನಿಖಾ ಸಂಸ್ಥೆಗಳು ಕರೆದರೆ ಎಲ್ಲಾ ಸತ್ಯಾಂಶವನ್ನು ಅವರಿಗೆ ವಿವರಿಸುವುದಾಗಿ ರೂಪಕುಮಾರ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ