ರಣವೀರ್ ಸಿಂಗ್-ಆಲಿಯಾ ಭಟ್ 
ಬಾಲಿವುಡ್

ರಣವೀರ್ ನಗ್ನ ಪೋಸ್‌ಗೆ ಟ್ರೋಲ್, ನಟಿ ಆಲಿಯಾ ಪ್ರತಿಕ್ರಿಯೆ: 'ಮಹಿಳೆಯರ ಭಾವನೆಗೆ ಧಕ್ಕೆ'; ನಟನ ವಿರುದ್ಧ ಎಫ್ಐಆರ್?

ಸಂಪೂರ್ಣ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ಟ್ರೋಲ್ ಆಗ್ತಿರುವ ನಟ ರಣವೀರ್ ಸಿಂಗ್ ಬಗ್ಗೆ ನಟಿ ಆಲಿಯಾ ಭಟ್ ಏನ್ ಹೇಳಿದರು ಗೊತ್ತಾ?.

ಮುಂಬೈ: ಸಂಪೂರ್ಣ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ಟ್ರೋಲ್ ಆಗ್ತಿರುವ ನಟ ರಣವೀರ್ ಸಿಂಗ್ ಬಗ್ಗೆ ನಟಿ ಆಲಿಯಾ ಭಟ್ ಏನ್ ಹೇಳಿದರು ಗೊತ್ತಾ?. ತಮ್ಮ ಅಭಿನಯದ ಡಾರ್ಲಿಂಗ್ಸ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು ರಣವೀರ್ ಸಿಂಗ್ ಬಗ್ಗೆ ನಕಾರಾತ್ಮಕ ಮಾತುಗಳನ್ನು ಕೇಳಲು ಇಷ್ಟಪಡುವುದಿಲ್ಲ ಎಂದಿದ್ದಾರೆ.

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಚಿತ್ರದಲ್ಲಿ ಆಲಿಯಾ, ರಣವೀರ್ ಸಿಂಗ್ ಜೊತೆ ನಟಿಸಿದ್ದಾರೆ. ತಮ್ಮ ಸಹನಟರು ಮ್ಯಾಗಜಿನ್‌ಗಾಗಿ ನಗ್ನ ಪೋಸ್ ನೀಡಿದ ಬಗ್ಗೆ ಮತ್ತು ಅದಕ್ಕಾಗಿ ಟ್ರೋಲ್ ಆಗಿರುವ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ನಟಿಯನ್ನು ಕೇಳಲಾಯಿತು. ಅದಕ್ಕೆ ಉತ್ತರಿಸಿದ ಆಲಿಯಾ ಭಟ್ ನನ್ನ ನೆಚ್ಚಿನ ರಣವೀರ್ ಸಿಂಗ್ ಬಗ್ಗೆ ನಕಾರಾತ್ಮಕವಾಗಿ ಹೇಳುವುದು ನನಗೆ ಇಷ್ಟವಿಲ್ಲ.

ಇಂತಹ  ಪ್ರಶ್ನೆಯೇ ನನಗೆ ಸಹಿಸಲಾಗದ ವಿಷಯ. ನಾನು ಅವರನ್ನು ಪ್ರೀತಿಸುತ್ತೇನೆ, ಅವರು ನಮ್ಮಲ್ಲಿ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚಿನವರು. ಅವರು ನಮಗೆ ಚಲನಚಿತ್ರಗಳ ಮೂಲಕ ತುಂಬಾ ನೀಡಿದ್ದಾನೆ. ನಾವು ಅವರಿಗೆ ಪ್ರೀತಿಯನ್ನು ಮಾತ್ರ ನೀಡಬೇಕು ಎಂದರು.

ಜೋಯಾ ಅಖ್ತರ್ ಅವರ 2019 ರ ಚಿತ್ರ ಗಲ್ಲಿ ಬಾಯ್ ನಲ್ಲಿ ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ನಟಿಸಿದ್ದರು. ಅವರು ಮುಂದೆ ಕರಣ್ ಜೋಹರ್ ಅವರ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಅನುಭವಿಗಳಾದ ಧರ್ಮೇಂದ್ರ, ಜಯಾ ಬಚ್ಚನ್ ಮತ್ತು ಶಬಾನಾ ಅಜ್ಮಿ ಸಹ ನಟಿಸಿದ್ದಾರೆ. ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಇತ್ತೀಚೆಗೆ ಕರಣ್ ಜೋಹರ್ ಅವರ ಚಾಟ್ ಶೋ ಕಾಫಿ ವಿತ್ ಕರಣ್ 7ರ ಮೊದಲ ಸಂಚಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು.

ನಟ ರಣವೀರ್ ವಿರುದ್ಧ ಎಫ್ಐಆರ್!
ರಣವೀರ್ ಸಿಂಗ್ ಬೆತ್ತಲೆ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರಿಂದ ರಣವೀರ್ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಈ ಮೂಲಕ 'ಮಹಿಳೆಯರ ಭಾವನೆಗಳನ್ನು ನೋಯಿಸಿದ್ದಾರೆ' ಎಂದು ರಣವೀರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅರ್ಜಿ ಸಲ್ಲಿಸಲಾಗಿದೆ. ಪೂರ್ವ ಮುಂಬೈ ಉಪನಗರದಲ್ಲಿರುವ ಸರ್ಕಾರೇತರ ಸಂಸ್ಥೆ(ಎನ್‌ಜಿಒ) ಪದಾಧಿಕಾರಿಯೊಬ್ಬರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಟ ತನ್ನ ಫೋಟೋಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ನಮ್ರತೆಗೆ ಅವಮಾನ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ ಅಲ್ಲದೆ ನಟನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT