ರಣವೀರ್ ಸಿಂಗ್ 
ಬಾಲಿವುಡ್

ಸಾಮಾಜಿಕ ಮಾಧ್ಯಮಗಳಲ್ಲಿ ನಗ್ನ ಫೋಟೊ ಹಂಚಿಕೊಂಡಿದ್ದ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

ಸಂಪೂರ್ಣ ಬೆತ್ತಲಾಗಿ ಫೋಟೊಶೂಟ್ ಮಾಡಿಸಿದ್ದ ನಟ ರಣವೀರ್ ಸಿಂಗ್, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಇದೀಗ ದೂರಿನ ಆಧಾರದ ಮೇಲೆ ಅವರ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಂಬೈ: ಬಾಲಿವುಡ್ ನಟ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಪತಿ ರಣವೀರ್ ಸಿಂಗ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗ್ನ ಫೋಟೊಶೂಟ್ ಮಾಡಿಸಿ, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಇದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಈ ಸಂಬಂಧ ಮುಂಬೈ ಪೊಲೀಸರು ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ ಮೂಲದ ಎನ್‌ಜಿಒ ನಟನ ವಿರುದ್ಧ ಇಲ್ಲಿನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ದೂರಿನ ಆಧಾರದ ಮೇಲೆ ಪೊಲೀಸರು, ರಣವೀರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಾದ 292 (ಅಶ್ಲೀಲ ಪುಸ್ತಕಗಳ ಮಾರಾಟ, ಇತ್ಯಾದಿ), 293 (ಯುವಕರಿಗೆ ಅಶ್ಲೀಲ ವಸ್ತುಗಳ ಮಾರಾಟ), 509 (ಪದ, ಸನ್ನೆ ಅಥವಾ ಕೃತ್ಯದ ಮೂಲಕ ಮಹಿಳೆಯನ್ನು ಅವಮಾನಿಸುವ ಉದ್ದೇಶ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚೆಂಬೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಬಾಲಿವುಡ್ ನಟ ರಣವೀರ್ ಸಿಂಗ್, ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಅವರ ಭಾವನೆಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದರು.

ರಣವೀರ್ ಸಿಂಗ್ ಇತ್ತೀಚೆಗೆ ನಿಯತಕಾಲಿಕೆಯೊಂದರ ಫೋಟೊಶೂಟ್‌ಗೆ ಬೆತ್ತಲೆಯಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ತಮ್ಮ ನಗ್ನ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಕಟಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಹಲವರು ಟೀಕಿಸಿದ್ದರು.

ಇದರ ಬಳಿಕ ರಣವೀರ್ ಸಿಂಗ್‌ ಅವರಿಂದ ಪ್ರೇರಿತರಾಗಿ ತಮಿಳು ನಟ ವಿಷ್ಣು ವಿಶಾಲ್ ಕೂಡ ಬೆತ್ತಲೆ ಫೋಟೊಶೂಟ್ ಮಾಡಿಸಿದ್ದರು.

ತಮ್ಮ ನಟನೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ನಟ ರಣವೀರ್ ಸಿಂಗ್ ಅವರು 'ಬಾಜಿರಾವ್ ಮಸ್ತಾನಿ', 'ಪದ್ಮಾವತ್' ಮತ್ತು 'ಗಲ್ಲಿ ಬಾಯ್' ಸಿನಿಮಾಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT