ನಟಿ ಜಾಕ್ವೆಲಿನ್ ಫರ್ನಾಂಡೀಸ್ 
ಬಾಲಿವುಡ್

200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ಜಾಕ್ವೆಲಿನ್ ಜಾಮೀನು ಅರ್ಜಿಯ ವಿಚಾರಣೆ ಇಂದು

ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರನ್ನೊಳಗೊಂಡಿರುವ  200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.

ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ಮತ್ತಿತರನ್ನೊಳಗೊಂಡಿರುವ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.

ಕಳೆದ ವಿಚಾರಣೆ ವೇಳೆಯಲ್ಲಿ ಜಾಕ್ವೆಲಿನ್ಗೆ  ಮಧ್ಯಂತರ ಜಾಮೀನು ನೀಡಲಾಗಿತ್ತು.ಜಾಕ್ವೆಲಿನ್ ಫರ್ನಾಂಡಿಸ್ ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಅವರ ಪರ ವಕೀಲ ಪ್ರಶಾಂತ್ ಪಾಟೀಲ್ ಎಎನ್ ಐ ಸುದ್ದಿಸಂಸ್ಥೆಗೆ  ಖಚಿತಪಡಿಸಿದ್ದಾರೆ.

ಕಳೆದ ಬಾರಿಯ ವಿಚಾರಣೆ ಸಂದರ್ಭದಲ್ಲಿ ಜಾಕ್ವೆಲಿನ್ ಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಜಾಕ್ವೆಲಿನ್ ಅವರಿಗೆ  ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಇಂದಿನವರೆಗೂ ರೂ. 50,000 ಜಾಮೀನು ಬಾಂಡ್‌ನಲ್ಲಿ ಮಧ್ಯಂತರ ಜಾಮೀನು ನೀಡಿದ್ದರು.

200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ  ಆಗಸ್ಟ್ 17, 2022 ರಂದು ದೆಹಲಿ ನ್ಯಾಯಾಲಯದಲ್ಲಿ ಅಪರಾಧಿ ಸುಖೇಶ್ ಚಂದ್ರಶೇಖರ್ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ ಪೂರಕ ಆರೋಪಪಟ್ಟಿಯಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಹೆಸರನ್ನು ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಪ್ರಸ್ತುತ ಪ್ರಕರಣದ ಎಲ್ಲಾ ಆರೋಪಿಗಳಿಗೆ ದೋಷಾರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆಯೂ ಕೋರ್ಟ್ ಇಡಿಗೆ ಸೂಚಿಸಿದೆ.

ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ತನಿಖೆಯ ಉದ್ದೇಶಕ್ಕಾಗಿ ಇಡಿ ಹಲವು ಬಾರಿ ಸಮನ್ಸ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ