ನಟಿ ಜಾಕ್ವೆಲಿನ್ ಫರ್ನಾಂಡೀಸ್ 
ಬಾಲಿವುಡ್

ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣ: ದೆಹಲಿ ಪೊಲೀಸರ ಮುಂದೆ ವಿಚಾರಣೆಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಾಜರು

ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. 

ನವದೆಹಲಿ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಬುಧವಾರ ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. 

ಶ್ರೀಲಂಕಾದ ಪ್ರಜೆಯಾಗಿರುವ ಬಾಲಿವುಡ್ ನಟಿ ಫೆರ್ನಾಂಡಿಸ್ ಮೂರನೇ ಸಮನ್ಸ್ ನೀಡಿದ ನಂತರ ತನಿಖೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಉದ್ಯಮಿ ಸುಕೇಶ್ ಚಂದ್ರಶೇಖರ್ ಗೆ ನಟಿಯನ್ನು ಪರಿಚಯಿಸಿದ ನಟ ಪಿಂಕಿ ಇರಾನಿ ಇಂದು ವಿಚಾರಣೆಗೆ ಆಗಮಿಸುವ ವೇಳೆ ಜೊತೆಗಿದ್ದರು. ಮೊನ್ನೆ ಸೋಮವಾರ ಜಾಕ್ವೆಲಿನ್ ಫರ್ನಾಂಡೀಸ್ ಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು, ಆದರೆ ಪೂರ್ವನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಮಯ ಕೇಳಿದ್ದರು. 

ಈ ತಿಂಗಳ ಆರಂಭದಲ್ಲಿ, ಮತ್ತೊಬ್ಬ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ಏಜೆನ್ಸಿಯು ಆರರಿಂದ ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿತ್ತು.

ಪ್ರಸ್ತುತ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಂತಹ ಉನ್ನತ ವ್ಯಕ್ತಿಗಳು ಸೇರಿದಂತೆ ಹಲವರನ್ನು ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ನಟಿ ಫತೇಹಿಯನ್ನು ಈ ಹಿಂದೆ ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿತ್ತು.

ಕಳೆದ ಆಗಸ್ಟ್ 17 ರಂದು, ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಿ ಇಡಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇಡಿ ಪ್ರಕಾರ, ಫತೇಹಿ ಮತ್ತು ಫೆರ್ನಾಂಡಿಸ್ ಚಂದ್ರಶೇಖರ್ ನಿಂದ ಐಷಾರಾಮಿ ಕಾರುಗಳು ಮತ್ತು ಇತರ ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!