ದೀಪಿಕಾ ಪಡುಕೋಣೆ 
ಬಾಲಿವುಡ್

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ಮುಂಬೈ ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲು!

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಎರಡು ದಿನಗಳ ಹಿಂದೆ ದೀಪಿಕಾ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ದೀಪಿಕಾ ಅವರ ಮ್ಯಾನೇಜರ್‌ ಹೇಳಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ.

ವೈದ್ಯರು ಅವರಿಗೆ ಹಲವಾರು ಟೆಸ್ಟ್‌ಗಳನ್ನು ಮಾಡಿಸಿದ್ದು, ಮಂಗಳವಾರ ಸಂಜೆ ಅವರನ್ನು ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಪಿಂಕ್‌ವಿಲ್ಲಾ ಡಾಟ್‌.ಕಾಂ ವರದಿ ಮಾಡಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಈ ಹಿಂದೆ ದೀಪಿಕಾ ಪಡುಕೋಣೆ ಹೈದರಾಬಾದ್ನಲ್ಲಿ ಶೂಟಿಂಗ್ ಸಮಯದ ವೇಳೆ ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿತ್ತು. ಕೆಲವು ದಿನಗಳವರೆಗೆ ಶೂಟಿಂಗ್‌ ಮುಂದೂಡಲಾಗಿತ್ತು.  ದೀಪಿಕಾ ಪಡುಕೋಣೆ ಅವರಿಗೆ ಪದೇ ಪದೇ ಅನಾರೋಗ್ಯ ಉಂಟಾಗುತ್ತಿರುವ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ