ವಡೋದರಲ್ಲಿ ಚಿತ್ರದ ಪ್ರಚಾರದ ವೇಳೆ ನಟ ರಣವೀರ್ ಸಿಂಗ್- ಆಲಿಯಾ ಭಟ್ 
ಬಾಲಿವುಡ್

ರಣವೀರ್ ಸಿಂಗ್, ಆಲಿಯಾ ಭಟ್ ಅಭಿನಯದ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ವಾರದಲ್ಲಿ 46 ಕೋಟಿ ರೂ. ಗಳಿಕೆ!

ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಮುಂಬೈ: ನಟ ರಣವೀರ್ ಸಿಂಗ್ ಮತ್ತು ಆಲಿಯಾ ಭಟ್ ಅಭಿನಯದ ನಿರ್ದೇಶಕ ಕರಣ್ ಜೋಹರ್ ಅವರ ಇತ್ತೀಚಿನ ಚಿತ್ರ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಬಿಡುಗಡೆಗೊಂಡ ಮೊದಲ ವಾರದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ45.90 ಕೋಟಿ ರೂ. ಸಂಗ್ರಹಿಸಿದೆ ಎಂದು ಚಿತ್ರತಂಡ ಸೋಮವಾರ ತಿಳಿಸಿದೆ.

ಚಿತ್ರರಂಗದ ಹಿರಿಯರಾದ ಧರ್ಮೇಂದ್ರ, ಶಬಾನಾ ಅಜ್ಮಿ ಮತ್ತು ಜಯಾ ಬಚ್ಚನ್ ಅವರನ್ನೂ ಒಳಗೊಂಡಿರುವ ಫ್ಯಾಮಿಲಿ ಎಂಟಟೈನರ್‌ ಶುಕ್ರವಾರ (ಜು.28) ದಂದು ದೇಶದಾದ್ಯಂತ ತೆರೆ ಕಂಡಿತು.

ಕರಣ್ ಜೋಹರ್ ಅವರ ಬ್ಯಾನರ್ ಧರ್ಮ ಪ್ರೊಡಕ್ಷನ್ಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಚಿತ್ರದ ವಾರಾಂತ್ಯದ ಸಂಗ್ರಹ ಎಷ್ಟು ಎಂಬುದನ್ನು ಹಂಚಿಕೊಂಡಿದೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ಮೇಲೆ ನಿಷ್ಕಲ್ಮಷ ಪ್ರೀತಿ ಮತ್ತು ಕೇವಲ ಪ್ರೀತಿಯನ್ನು ಧಾರೆಯೆರೆದಿದ್ದಕ್ಕಾಗಿ ಧನ್ಯವಾದಗಳು!' ಪ್ರೊಡಕ್ಷನ್ ಹೌಸ್ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.

ಧರ್ಮ ಪ್ರೊಡಕ್ಷನ್ಸ್ ಬ್ಯಾನರ್ ಪ್ರಕಾರ, ಕರಣ್ ಜೋಹರ್ ಅವರ 25ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಿರ್ದೇಶಿಸಿದ ಚಿತ್ರವು ಭಾನುವಾರ 18.75 ಕೋಟಿ ರೂ. ಗಳಿಸಿದೆ. ಈ ಮೂಲಕ ಚಿತ್ರದ ಒಟ್ಟು ಗಳಿಕೆಯು 27.15 ಕೋಟಿ ರೂಪಾಯಿಗಳಿಂದ 45.90 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದಿದೆ.

'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾವು ವ್ಯತಿರಿಕ್ತ ಹಿನ್ನೆಲೆ ಮತ್ತು ಸಂಸ್ಕೃತಿಗಳಿಗೆ ಸೇರಿದ ದಂಪತಿಗಳ ನಡುವಿನ ಪ್ರೇಮಕಥೆಯನ್ನು ಹೇಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ