ಅರ್ಬಾಜ್ ಖಾನ್ ಮತ್ತು ಶೂರಾ 
ಬಾಲಿವುಡ್

ತನಗಿಂತ 22 ವರ್ಷ ಕಿರಿಯ ಯುವತಿ ಜೊತೆ ಸಲ್ಮಾನ್ ಸಹೋದರ ಅರ್ಬಾಜ್ ಖಾನ್ 2ನೇ ಮದುವೆ!

ಬಾಲಿವುಡ್​​ನ ಜನಪ್ರಿಯ ನಟ ಸಲ್ಮಾನ್ ಖಾನ್ ಅವರ ಕಿರಿಯ ಸಹೋದರ ನಟ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ವರಿಸಲಿದ್ದಾರೆ. ಡಿಸೆಂಬರ್ 24 ರಂದು ನಡೆಯಲಿದೆ.

ಮುಂಬೈ:  ಬಾಲಿವುಡ್​​ನ ಜನಪ್ರಿಯ ನಟ ಸಲ್ಮಾನ್ ಖಾನ್ ಅವರ ಕಿರಿಯ ಸಹೋದರ ನಟ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ವರಿಸಲಿದ್ದಾರೆ. ಡಿಸೆಂಬರ್ 24 ರಂದು ನಡೆಯಲಿದೆ.

ಮುಂಬೈನಲ್ಲಿರುವ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅರ್ಬಾಜ್ ಖಾನ್ ಅವರಿಗೆ ಇದು ಎರಡನೇ ಮದುವೆಯಾಗಿದೆ. 1998 ರಲ್ಲಿ ನಟಿ ಮಲೈಕಾ ಅರೋರಾ ಅವರನ್ನು ವಿವಾಹವಾದ ಅರ್ಬಾಜ್ ತಮ್ಮ 19 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಿ 2017 ರಲ್ಲಿ ವಿಚ್ಛೇದನ ಪಡೆದರು.

ಮಲೈಕಾಳೊಂದಿಗೆ ಸಂಬಂಧ ಮುರಿದುಬಿದ್ದ ನಂತರ, ಅರ್ಬಾಜ್ ತನ್ನ  ನಟಿ ಮತ್ತು ರೂಪದರ್ಶಿ ಜಾರ್ಜಿಯಾ ಆಂಡ್ರಿಯಾ ಅವರೊಂದಿಗೆ ದೀರ್ಘಕಾಲದಿಂದ ಡೇಟಿಂಗ್ ಮಾಡುತ್ತಿದ್ದರು. ಆದರೆ ಇಬ್ಬರೂ ಬೇರ್ಪಟ್ಟರು. ಇದಾದ ನಂತರ ಒಂಟಿಯಾಗಿದ್ದ ಅರ್ಬಾಜ್ ಅವರು ಇದೀಗ ಮತ್ತೆ ಮದುವೆ ಆಗುತ್ತಿದ್ದಾರೆ ಎನ್ನಲಾಗಿದೆ.

ಅರ್ಬಾಜ್ ಮದುವೆಯಾಗುತ್ತಿರುವ ಶೂರಾ ಖಾನ್ ಮೇಕಪ್ ಕಲಾವಿದೆಯಂತೆ. ಇಬ್ಬರಿಗೂ 22 ವರ್ಷಗಳ ಅಂತರವಿದೆ. ಶುರಾ ಖಾನ್ ಈ ಹಿಂದೆ ರವೀನಾ ಟಂಡನ್ ಮತ್ತು ಅವರ ಮಗಳು ರಾಶಾ ಥಡಾನಿ ಅವರೊಂದಿಗೆ ಕೆಲಸ ಮಾಡಿದ್ದರು.

ಅರ್ಬಾಜ್ ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸಲ್ಮಾನ್ ಖಾನ್ ಮನೆಯಲ್ಲಿ ಅಣ್ಣನ ಮರು ಮದುವೆ ಸಂಭ್ರಮ ಮನೆ ಮಾಡಲಿದೆ ಎನ್ನುವ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel