ರಣಬೀರ್ ಕಪೂರ್ 
ಬಾಲಿವುಡ್

ಧಾರ್ಮಿಕ ಭಾವನೆಗೆ ಧಕ್ಕೆ: ಬಾಲಿವುಡ್ ನಟ ರಣಬೀರ್ ಕಪೂರ್ ವಿರುದ್ಧ ದೂರು

ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿ ಕ್ರಿಸ್‌ಮಸ್ ಆಚರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮುಂಬೈನ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.

ಮುಂಬೈ: ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿ ಕ್ರಿಸ್‌ಮಸ್ ಆಚರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮುಂಬೈನ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.
  
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ದಾಖಲಾಗಿಲ್ಲ.

ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಅವರ ಮೂಲಕ ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂಜಯ್ ತಿವಾರಿ, ವಿಡಿಯೋದಲ್ಲಿ ನಟ ರಣಬೀರ್ ಕಪೂರ್ ಅವರು "ಜೈ ಮಾತಾ ದಿ" ಎಂದು ಹೇಳುವಾಗ ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ಹಿಂದೂ ಧರ್ಮದಲ್ಲಿ, ಇತರ ದೇವತೆಗಳನ್ನು ಆವಾಹನೆ ಮಾಡುವ ಮೊದಲು ಅಗ್ನಿ ದೇವರನ್ನು ಆವಾಹನೆ ಮಾಡಲಾಗುತ್ತದೆ. ಆದರೆ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಉದ್ದೇಶಪೂರ್ವಕವಾಗಿ ಮತ್ತೊಂದು ಧರ್ಮದ ಹಬ್ಬವನ್ನು ಆಚರಿಸುವಾಗ ಮದ್ಯ ಬಳಸಿರುವುದು ಮತ್ತು "ಜೈ ಮಾತಾ ದಿ" ಎಂದು ಘೋಷಣೆ ಕೂಗುವ ಮೂಲದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!