ಪೂಜಾ ಹೆಗ್ಡೆ ಸಹೋದರನ ವಿವಾಹದಲ್ಲಿ ಸಲ್ಮಾನ್ ಖಾನ್ 
ಬಾಲಿವುಡ್

ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಮಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಹಲವಾರು ಸಾಮಾಜಿಕ ಮಾಧ್ಯಮ ಫ್ಯಾನ್ ಕ್ಲಬ್‌ ಗಳು ಸಲ್ಮಾನ್ ವಧು ಮತ್ತು ವರನೊಂದಿಗೆ ಪೋಸ್ ನೀಡುತ್ತಿರುವ ಚಿತ್ರಗಳನ್ನು ಹಂಚಿಕೊಂಡಿವೆ.

ಕೆಲ ದಿನಗಳ ಹಿಂದೆ ಸಲ್ಮಾನ್ ಖಾನ್ ಮತ್ತು ಪೂಜಾ ಹೆಗ್ಡೆ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿಗಳು ಹರಿದಾಡಿದ್ದವು. ಸಲ್ಮಾನ್ ಪೂಜಾ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಇವರು ಪ್ರೀತಿಯಲ್ಲಿ ಬಿದ್ದಿದ್ದಾರೆ ಹೀಗಾಗಿ ಸಲ್ಮಾನ್ ತನ್ನ ಮುಂಬರುವ ಎರಡು ಚಿತ್ರಗಳಲ್ಲಿ ಪೂಜಾ ಹೆಗ್ಡೆ ಅವರಿಗೆ ಅವಕಾಶ ನೀಡಿದ್ದಾರೆ ಎಂಬೆಲ್ಲಾ ಸುದ್ದಿಗಳು ಹರಿದಾಡಿದ್ದವು. ಬಳಿಕ ಈ ಸುದ್ದಿಗಳು ಸುಳ್ಳು ಎಂದು ಸಲ್ಮಾನ್ ಆಪ್ತ ವಲಯ ಸ್ಪಷ್ಟಪಡಿಸಿತ್ತು.

ಸಲ್ಮಾನ್ ಖಾನ್ ಅವರ ಮುಂದಿನ ಚಿತ್ರ ‘ಕಿಸಿ ಕಾ ಭಾಯ್ ಕಿಸಿ ಕಾ ಜಾನ’ ಚಿತ್ರದಲ್ಲಿ ಪೂಜಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮದುವೆ ಸಮಾರಂಭದಲ್ಲಿ ಸಲ್ಮಾನ್ ಖಾನ್ ಅವರು ಪೂಜಾ ಕುಟುಂಬದ ಜೊತೆ ಫೋಟೊಗಳಿಗೆ ಪೋಸ್ ಕೊಟ್ಟಿದ್ದಾರೆ. ಪೂಜಾ ಹೆಗ್ಡೆ ಅವರು ಸಮಾರಂಭದಲ್ಲಿ ಸಲ್ಮಾನ್ ಅವರ ‘ಚೋಟೆ ಚೋಟೆ ಭೈಯೋಂ ಕೆ ಬಡೇ ಭಯ್ಯಾ’ ಹಾಡಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video