ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಫೆಬ್ರವರಿ 6ರಂದು ರಾಜಸ್ತಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಸಿದ್ಧಾರ್ಥ್- ಕಿಯಾರಾ ಅಡ್ವಾಣಿ ಮದುವೆ

ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ ಕರೆಸಿಕೊಳ್ಳುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ
Shilpa D
Updated On : 3 Feb 2023, 1:43 pm

ಮುಂಬೈ: ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ ಕರೆಸಿಕೊಳ್ಳುವ  ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು  ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ರಾಜಸ್ತಾನದ ಜೈಸಲ್ಮೇರ್‌ನಲ್ಲಿರುವ ಐಷಾರಾಮಿ ಸೂರ್ಯಘರ್ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಈ ಜೋಡಿ ಮದುವೆಯಾಗಲಿದ್ದಾರೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಭಾಗಿಯಾಗಲಿದ್ದು, ಫೆಬ್ರುವರಿ 4 ರಿಂದ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಲಿವೆ.

ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ವಿವಾಹವು  ಅವರ ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ. ಕಳೆದ ಸುಮಾರು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಜೊತೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಕೊನೆಗೂ ಮದುವೆಯಾಗುತ್ತಿದ್ದಾರೆ.   

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement