ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ

ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
Lingaraj Badiger
Updated On : 7 Feb 2023, 7:48 pm

ಜೈಸಲ್ಮೇರ್‌: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ಇಂದು ಜೈಸಲ್ಮೇರ್‌ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಬ್ಯಾಂಡ್ ಬಾಜಾ ಮತ್ತು ಬಾರಾತ್ ನೊಂದಿಗೆ ಹಿಂದೂ ಸಂಪ್ರದಾಯದಂತೆ ಸ್ಟಾರ್ ದಂಪತಿಗಳು ವಿವಾಹವಾದರು.

Advertisement

Advertisement

ಇದನ್ನು ಓದಿ: ಫೆಬ್ರವರಿ 6ರಂದು ರಾಜಸ್ತಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಸಿದ್ಧಾರ್ಥ್- ಕಿಯಾರಾ ಅಡ್ವಾಣಿ ಮದುವೆ

ದೆಹಲಿಯ ಪ್ರಸಿದ್ಧ 'ಜೀ' ವೆಡ್ಡಿಂಗ್ ಬ್ಯಾಂಡ್ ಮಂಗಳವಾರ ಸ್ಥಳಕ್ಕೆ ಆಗಮಿಸಿತ್ತು ಮತ್ತು ಸಿದ್ಧಾರ್ಥ್ ಸಾಂಪ್ರದಾಯಿಕ ಘೋಡಿಯಲ್ಲಿ ಸೂರ್ಯಘರ್ ಅರಮನೆ ರಾಯಲ್ ಎಂಟ್ರಿ ನೀಡಿದರು.

ಕರಣ್ ಜೋಹರ್, ಮನೀಶ್ ಮಲ್ಹೋತ್ರಾ, ಶಾಹಿದ್ ಕಪೂರ್, ಜೂಹಿ ಚಾವ್ಲಾ ಮತ್ತು ಮೀರಾ ರಜಪೂತ್ ಕಪೂರ್ ಸೇರಿದಂತೆ ಹಲವು ಗಣ್ಯರು ಸಿದ್ಧಾರ್ಥ್-ಕಿಯಾರಾ  ಮದುವೆಯಲ್ಲಿ ಭಾಗವಹಿಸಿದ್ದರು.

ಸ್ಟಾರ್ ದಂಪತಿ ಖಾಸಗಿಯಾಗಿ ವಿವಾಹವಾಗಲು ಬಳಯಸಿದ್ದರಿಂದ ಮದುವೆ ಸಮಾರಂಭದ ಯಾವುದೇ ಫೋಟೋಗಳು ಅಥವಾ ವೀಡಿಯೊಗಳು ಮಾಧ್ಯಮಗಳಿಗೆ ಸೋರಿಕೆಯಾಗದಂತೆ ನೋಡಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement