ಕಜಾನ್ ಖಾನ್ ನಿಧನ 
ಬಾಲಿವುಡ್

ಹಬ್ಬ ಖ್ಯಾತಿಯ ಖ್ಯಾತ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ

ಹಬ್ಬ, ನಾಗದೇವತೆ ಸೇರಿದಂತೆ ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಹಬ್ಬ, ನಾಗದೇವತೆ ಸೇರಿದಂತೆ ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಅನೇಕ ಸಿನಿಮಾಗಳಲ್ಲಿ ಖಳ ನಟನಾಗಿ ಮಿಂಚಿದ್ದ ಮಲಯಾಳಂ ನಟ ಕಜಾನ್ ಖಾನ್ (45) ಹೃದಯಾಘಾತದಿಂದ ಸೋಮವಾರ ಸಂಜೆ ನಿಧನರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಮಲಯಾಳಂ ನಿರ್ಮಾಪಕ ಎನ್.ಎಂ. ಬಾದುಷಾ ಅವರು ಈ ಸುದ್ದಿಯನ್ನು ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಿಳಿಸಿದ್ದಾರೆ.

ಕಜಾನ್ ಖಾನ್ ಅವರು ಮಲಯಾಳಂ, ತಮಿಳು, ಕನ್ನಡ ಸೇರಿದಂತೆ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಕನ್ನಡದ ‘ಹಬ್ಬ’, ‘ಚೆಲುವ’, ‘ನಾಗದೇವತೆ’ ಸಿನಿಮಾಗಳಲ್ಲಿ ಅವರು ಖಳನಟರಾಗಿ ಕಾಣಿಸಿಕೊಂಡಿದ್ದರು. 1992 ರಲ್ಲಿ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದ ಕಜಾನ್ ಖಾನ್ ಅವರು ‘ಸಿಐಡಿ ಮೂಸಾ’ ಎಂಬ ಚಿತ್ರದ ಮೂಲಕ ಹೆಚ್ಚು ಜನಪ್ರಿಯರಾಗಿದ್ದರು. ಖಾನ್ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!