ಸಾಂದರ್ಭಿಕ ಚಿತ್ರ 
ಬಾಲಿವುಡ್

'ಹನುಮಂತ ದೇವರೇ ಅಲ್ಲ...' ಆದಿಪುರುಷ್ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಶಿರ್, ನೆಟ್ಟಿಗರ ಕಿಡಿ!

ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ ಆದಿಪುರುಷ್ ಚಿತ್ರ ಬಿಡುಗಡೆಯಾದಾಗಿನಿಂದ ಒಂದರ ಹಿಂದೆ ಒಂದರಂತೆ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಇದೀಗ ಅದರ ಸಂಭಾಷಣೆಕಾರ ಹಾಗೂ ಗೀತರಚನೆಕಾರ ಮನೋಜ್ ಮುಂತಶಿರ್ ಶುಕ್ಲಾ 'ಹನುಮಂತ ದೇವರಲ್ಲ' ಎಂದು ಹೇಳಿದ್ದಾರೆ.

ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ ಆದಿಪುರುಷ್ ಚಿತ್ರ ಬಿಡುಗಡೆಯಾದಾಗಿನಿಂದ ಒಂದರ ಹಿಂದೆ ಒಂದರಂತೆ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಇದೀಗ ಅದರ ಸಂಭಾಷಣೆಕಾರ ಹಾಗೂ ಗೀತರಚನೆಕಾರ ಮನೋಜ್ ಮುಂತಶಿರ್ ಶುಕ್ಲಾ 'ಹನುಮಂತ ದೇವರಲ್ಲ' ಎಂದು ಹೇಳಿದ್ದಾರೆ.

ಮನೋಜ್ ಮುಂತಶಿರ್ ಇತ್ತೀಚಿನ ಸಂದರ್ಶನದಲ್ಲಿ, ಭಗವಾನ್ ಹನುಮಂತನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತೀವ್ರ ಟೀಕೆ ವ್ಯಕ್ತವಾಗಿದೆ.

ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮನೋಜ್ ಚಿತ್ರಕ್ಕಾಗಿ ಬರೆದಿರುವ ಸಂಭಾಷಣೆಗಳನ್ನು ಬಹಳ ಸುಲಭವಾಗಿ ಸಮರ್ಥಿಸಿಕೊಂಡಿದ್ದಾರೆ. 'ಬಜರಂಗಬಲಿ ದೇವರಲ್ಲ, ಅವನು ಭಕ್ತ. ಆತನ ಭಕ್ತಿಯಲ್ಲಿ ಆ ಶಕ್ತಿ ಇದ್ದುದರಿಂದಲೇ ಆತನನ್ನು ದೇವರನ್ನಾಗಿ ಮಾಡಿದ್ದೇವೆ' ಎಂದು ಮನೋಜ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆಯೇ ಆದಿಪುರುಷ ತನ್ನ ನಾಲ್ಕನೇ ದಿನವಾದ ಸೋಮವಾರ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕುಸಿತ ಕಂಡಿದೆ. ಓಂ ರಾವತ್ ನಿರ್ದೇಶನದ ಈ ಚಿತ್ರ ಮೊದಲ ವಾರದಲ್ಲಿ ಉತ್ತಮ ಗಳಿಕೆ ಕಂಡಿದೆ. ಆದರೆ, ಸೋಮವಾರದಂದು ಚಿತ್ರಕ್ಕೆ ಭಾರೀ ಹೊಡೆತ ಬಿದ್ದಿದೆ ಎಂದು ವ್ಯಾಪಾರ ತಜ್ಞ ತರಣ್ ಆದರ್ಶ್ ಬಹಿರಂಗಪಡಿಸಿದ್ದಾರೆ.

ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಶೇಕಡಾ 75 ರಿಂದ 77 ರಷ್ಟು ಕುಸಿತ ಕಂಡಿದೆ ಎಂದು ಪಿಂಕ್ವಿಲ್ಲಾ ವರದಿ ಹೇಳಿದೆ. ಇದರ ಪರಿಣಾಮವಾಗಿ, ಚಿತ್ರದ ಹಿಂದಿ ಆವೃತ್ತಿಯು 4 ದಿನದಂದು ಬಾಕ್ಸ್ ಆಫೀಸ್‌ನಲ್ಲಿ ಕೇವಲ 8.5 ಕೋಟಿ ರೂಪಾಯಿ ಗಳಿಕೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT