ಪ್ರದೀಪ್ ಸರ್ಕಾರ್ 
ಬಾಲಿವುಡ್

'ಪರಿಣೀತಾ' ನಿರ್ದೇಶಕ ಪ್ರದೀಪ್ ಸರ್ಕಾರ್ ಇನ್ನಿಲ್ಲ

ಬಾಲಿವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ 68 ವರ್ಷ ವಯಸ್ಸಾಗಿತ್ತು.

ಮುಂಬಯಿ: ಬಾಲಿವುಡ್‌ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ 68 ವರ್ಷ ವಯಸ್ಸಾಗಿತ್ತು.

ಮಾರ್ಚ್ 24ರ ಬೆಳಗಿನಜಾವ 3.30ರ ಸುಮಾರಿಗೆ ಪ್ರದೀಪ್ ಕೊನೆಯುಸಿರೆಳೆದಿದ್ದಾರೆ. ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.  ಅವರ ಆರೋಗ್ಯ ಗಂಭೀರವಾಗುತ್ತಿದ್ದಂತೆಯೇ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರದೀಪ್ ಸರ್ಕಾರ್ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಾಲಿವುಡ್‌ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜನಪ್ರಿಯ ಚಲನಚಿತ್ರ ನಿರ್ದೇಶಕ ಪ್ರದೀಪ್ ಸರ್ಕಾರ್ ಅವರು ಪರಿಣೀತಾ, ಲಗಾ ಚುನಾರಿ ಮೇ ದಾಗ್, ಮರ್ದಾನಿ ಮತ್ತು ಹೆಲಿಕಾಪ್ಟರ್ ಈಲಾ ಮುಂತಾದ ಹಿಟ್ ಚಲನಚಿತ್ರಗಳನ್ನು ನಿರ್ದೇಶಿಸಿ ಹೆಸರುವಾಸಿಯಾಗಿದ್ದಾರೆ.

ಪ್ರದೀಪ್ ಸರ್ಕಾರ್ ಮತ್ತು ಅವರ ಸಹೋದರಿ ಮಾಧುರಿ ಅವರಿಗೆ ತುಂಬಾ ಆತ್ಮೀಯರಾಗಿದ್ದ ನಟಿ ನೀತು ಚಂದ್ರ ಅವರು ಟ್ವಿಟರ್‌ ನಲ್ಲಿ ಅವರ ನಿಧನವನ್ನು ಖಚಿತಪಡಿಸಿದ್ದಾರೆ. “ನಮ್ಮ ಆತ್ಮೀಯ ನಿರ್ದೇಶಕ ಪ್ರದೀಪ್ ಸರ್ಕಾರ್ ದಾದಾ ಅವರ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ನಾನು ಅವರೊಂದಿಗೆ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ಅವರ ಚಲನಚಿತ್ರಗಳನ್ನು ಜೀವನಕ್ಕಿಂತ ದೊಡ್ಡದಾಗಿ ಕಾಣುವಂತೆ ಮಾಡುವ ಪ್ರತಿಭೆಯನ್ನು ಹೊಂದಿದ್ದರು. ದಾದಾ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ” ಎಂದು ಅವರು ಬರೆದುಕೊಂಡಿದ್ದಾರೆ. ಸಂಜೆ 4 ಗಂಟೆಗೆ ಸಂತಾಕ್ರೂಜ್ ನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!