ನಟಿ ಆಕಾಂಕ್ಷಾ ದುಬೆ ಸಾವು 
ಬಾಲಿವುಡ್

ವಾರಣಾಸಿಯಲ್ಲಿ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅನುಮಾನಾಸ್ಪದ ಸಾವು!

ಖ್ಯಾತ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ವಾರಣಾಸಿ ಹೊಟೆಲ್ ನಲ್ಲಿ ಅವರ ಶವ ಪತ್ತೆಯಾಗಿದೆ.

ವಾರಣಾಸಿ: ಖ್ಯಾತ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ವಾರಣಾಸಿ ಹೊಟೆಲ್ ನಲ್ಲಿ ಅವರ ಶವ ಪತ್ತೆಯಾಗಿದೆ.

ಭೋಜಪುರಿ ಚಿತ್ರರಂಗದ ಜನಪ್ರಿಯ ನಟಿ ಹಾಗೂ ಡ್ಯಾನ್ಸರ್ ಆಕಾಂಕ್ಷಾ ದುಬೆ ಅವರು ವಾರಾಣಸಿಯ ಹೋಟೆಲ್‌ ಒಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ವರದಿಯಾಗಿದೆ. ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಆಕಾಂಕ್ಷಾ ಅವರ ಪತ್ತೆಯಾಗಿದ್ದು, ಪ್ರಾಥಮಿಕವಾಗಿ ಇದೊಂದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

25 ವರ್ಷದ ನಟಿ ಆಕಾಂಕ್ಷಾ ತಮ್ಮ ಮುಂದಿನ ಚಿತ್ರಕ್ಕಾಗಿ ವಾರಣಾಸಿಯಲ್ಲಿ ಶೂಟಿಂಗ್‌ಗೆ ತೆರಳಿದ್ದರು. ತಮ್ಮ ಪಾಲಿನ ಶೂಟಿಂಗ್ ಮುಗಿಸಿ ವಾರಾಣಸಿಯ ಸಾರಾನಾಥ್ ಹೋಟೆಲ್‌ನಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಹೋಟೆಲ್ ಸಿಬ್ಬಂದಿ ರೂಮಿಗೆ ತೆರಳಿದಾಗ ನಟಿಯ ಶವ ಪತ್ತೆಯಾಗಿದೆ. ಕೂಡಲೇ ಹೊಟೆಲ್ ಅಧಿಕಾರಿಗಳಿಂದ ಪೊಲೀಸರಿಗೆ ಮಾಹಿತಿ ತಿಳಿದಿದ್ದು, ಸ್ಥಳಕ್ಕೆ ದೌಡಾಯಿಸಿದ ವಾರಣಾಸಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಂತೆಯೇ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಆಕಾಂಕ್ಷಾ ಸಾವಿನ ಬಗ್ಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವಾರಾಣಸಿ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಯಾರು ಈ ಆಕಾಂಕ್ಷಾ ದುಬೆ?
ಭೋಜಪುರಿ ಚಿತ್ರರಂಗದ ಕನಸಿನ ರಾಣಿಯಂದು ಗುರುತಿಸಿಕೊಂಡಿದ್ದ ಮಿರ್ಜಾಪುರ್ ಮೂಲದ ಆಕಾಂಕ್ಷಾ ಅವರು ಐಎಎಸ್ ಅಧಿಕಾರಿ ಆಗಬೇಕೆಂದುಕೊಂಡು ಮುಂಬೈ ಸೇರಿದ್ದರು. ಆದರೆ, ಅಲ್ಲಿಂದ ಭೋಜಪುರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಹೆಸರು ಮಾಡಿದ್ದರು. ನಿನ್ನೆಯಷ್ಟೇ ಅವರು ಬೆಲ್ಲಿ ಡ್ಯಾನ್ಸ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಭೋಜಪುರಿಯ ಮೇರಿ ಜಂಗ್, ಮೇರಿ ಪೈಸಲಾ, ಮುಜ್ಸೆ ಶಾದಿ ಕರೋಗೆ (ಭೋಜಪುರಿ), ವೀರೋನ್ ಕಿ ವೀರ, ಕಸಮ್ ಪೈದಾ ಕರನೇ ಕಿ 2 ಸಿನಿಮಾಗಳಲ್ಲಿ ಮಿಂಚಿದ್ದಲ್ಲದೇ ಆಕಾಂಕ್ಷಾ ಹಲವು ಭೋಜಪುರಿ ಮ್ಯುಸಿಕ್ ಅಲ್ಬಂಗಳಲ್ಲಿ ನಟಿಸಿ ಗಮನ ಸೆಳೆದಿದ್ದರು. ಆಕಾಂಕ್ಷಾ ಅವರು ಇತ್ತೀಚೆಗೆ ಸಮರ್ ಸಿಂಗ್ ಎನ್ನುವ ನಟರೊಬ್ಬರ ಜೊತೆ ಡೇಟಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT