ರಣಬೀರ್ ಕಪೂರ್ 
ಬಾಲಿವುಡ್

ಬೆಟ್ಟಿಂಗ್ ಆ್ಯಪ್‌ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಇಡಿ ಸಮನ್ಸ್

ಛತ್ತೀಸ್‌ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು,  ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು...

ನವದೆಹಲಿ: ಛತ್ತೀಸ್‌ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು,  ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಳೆದ ತಿಂಗಳು ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧಪಟ್ಟಂತೆ 417 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಏಜೆನ್ಸಿಯೊಂದು ತನಿಖೆ ಮಾಡಿ ಹೇಳಿತ್ತು. ಈಗ ಈ ವಿಚಾರವಾಗಿ ನಟ ಬಾಲಿವುಡ್ ನಟ ರಣಬೀರ್ ಕಪೂರ್‌ಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಅಕ್ಟೋಬರ್ 6 ರಂದು ತನಿಖಾ ಸಂಸ್ಥೆಯ ರಾಯ್‌ಪುರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ರಣಬೀರ್ ಕಪೂರ್‌ಗೆ ಸೂಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಸುಮಾರು 14-15 ಸೆಲೆಬ್ರಿಟಿಗಳು ಮತ್ತು ನಟರನ್ನು ಸಹ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಶೀಘ್ರದಲ್ಲೇ ಸಮನ್ಸ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹೊಸ ಬಳಕೆದಾರರನ್ನು ನೋಂದಾಯಿಸಲು, ಐಡಿಗಳನ್ನು ರಚಿಸಲು ಮತ್ತು ಬೇನಾಮಿ ಬ್ಯಾಂಕ್ ಖಾತೆಗಳ ಲೇಯರ್ಡ್ ವೆಬ್ ಮೂಲಕ ಹಣ ವ್ಯವಹಾರ ನಡೆಸಲು ಈ ಆನ್‌ಲೈನ್ ಬುಕ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಬಳಸಲಾಗುತ್ತಿದೆ ಎಂದು ಏಜೆನ್ಸಿ ಆರೋಪಿಸಿದೆ.

ಈ ಆಪ್‌ನ ಅನೇಕ ಜಾಹೀರಾತುಗಳಲ್ಲಿ ರಣಬೀರ್ ಕಪೂರ್ ಅವರು ಕಾಣಿಸಿಕೊಂಡಿದ್ದು, ಈ ಸಂಬಂಧ ಅವರಿಗೆ ಸಿಕ್ಕಾಪಟ್ಟೆ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗಿದೆ. ಹಾಗಾಗಿ ರಣಬೀರ್ ಕಪೂರ್ ಅವರನ್ನು ಅಕ್ಟೋಬರ್ 6 ರಂದು ವಿಚಾರಣೆ ಮಾಡೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಡಗುಗಳ ಮೇಲೆ ಇರಾನ್ ದಾಳಿ: 'ಕದನ ವಿರಾಮ ಉಲ್ಲಂಘನೆ ಮೂರ್ಖತನ-ಟ್ರಂಪ್ ಕೆಂಡಾಮಂಡಲ!

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು

ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾವ ಪ್ರಯತ್ನವನ್ನೂ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ!