ಪೂಜಾ ಹೆಗ್ಡೆ 
ಬಾಲಿವುಡ್

ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆ

ಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ. 

ಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ. ಮಲಯಾಳಂ ಚಿತ್ರಗಳಾದ ಸೆಲ್ಯೂಟ್ ಮತ್ತು ಕಾಯಂಕುಲಂ ಕೊಚುನ್ನಿ ಚಿತ್ರಗಳಿಗೆ ಹೆಸರುವಾಸಿಯಾದ ರೋಶನ್ ಆಂಡ್ರ್ಯೂಸ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆಯನ್ನು ಅಂತಿಮಗೊಳಿಸಿಲ್ಲ. ಪ್ರಕರಣವೊಂದರ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಈ ಪ್ರಕ್ರಿಯೆಯಲ್ಲಿ ಮೋಸ ಮತ್ತು ದ್ರೋಹದ ಜಾಲವನ್ನು ಬಹಿರಂಗಪಡಿಸುವುದೇ ಚಿತ್ರದ ತಿರುಳು.

'ಇದೊಂದು ಅತ್ಯಾಕರ್ಷಕ ಮತ್ತು ವಿಭಿನ್ನ ಕಥಾಹಂದರವನ್ನು ಹೊಂದಿರುವ ವಿಶೇಷ ಚಿತ್ರವಾಗಿದೆ. ರೋಶನ್ ಆಂಡ್ರ್ಯೂಸ್ ದೊಡ್ಡ ಪರದೆಯ ಮೇಲೆ ಮ್ಯಾಜಿಕ್ ಮಾಡುವಲ್ಲಿ ಹೆಸರಾಗಿದ್ದಾರೆ ಮತ್ತು ಈ ಪ್ರಯಾಣವನ್ನು ಪ್ರಾರಂಭಿಸಲು ಕಾತರದಿಂದ ಕಾಯುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ವಿಶಿಷ್ಟ ಮತ್ತು ವಿಭಿನ್ನ ಪಾತ್ರದಲ್ಲಿ ನೋಡಬಹುದು. ಶಾಹಿದ್ ಕಪೂರ್ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಅವರು ಅತ್ಯುತ್ತಮ ನಟ ಆಗಿದ್ದಾರೆ ಮತ್ತು ನಮ್ಮ ಸಹಯೋಗವು ಸ್ಮರಣೀಯವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ನಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂಬರುವ ಚಿತ್ರವು ಜೀ ಸ್ಟುಡಿಯೋಸ್ ಮತ್ತು ರಾಯ್ ಕಪೂರ್ ಫಿಲ್ಮ್ಸ್ ಬೆಂಬಲಿತವಾಗಿದೆ. ಚಿತ್ರವು ಶೀಘ್ರದಲ್ಲೇ ಸೆಟ್ಟೇರಲಿದ್ದು, 2024 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ