ಅರ್ಬಾಜ್ ಖಾನ್, ಸಲ್ಮಾನ್ ಖಾನ್ 
ಬಾಲಿವುಡ್

ಸನ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ; ಆತಂಕಕಾರಿ ಘಟನೆಯಿಂದ ಕುಟುಂಬಕ್ಕೆ ಆಘಾತ: ಅರ್ಬಾಜ್ ಖಾನ್

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಸಹೋದರ ಅರ್ಬಾಜ್ ಖಾನ್ ಸೋಮವಾರ ಹೇಳಿಕೆ ನೀಡಿದ್ದು, ಇದು "ಗೊಂದಲ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಅವರು ಪೊಲೀಸರೊಂದಿಗೆ ಸಹಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಯ ಕುರಿತು ಸಹೋದರ ಅರ್ಬಾಜ್ ಖಾನ್ ಸೋಮವಾರ ಹೇಳಿಕೆ ನೀಡಿದ್ದು, ಇದು "ಗೊಂದಲ ಮತ್ತು ಆತಂಕಕಾರಿ ಎಂದು ಬಣ್ಣಿಸಿದ್ದಾರೆ. ಅಲ್ಲದೇ ಅವರು ಪೊಲೀಸರೊಂದಿಗೆ ಸಹಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಭಾನುವಾರ ಮುಂಜಾನೆ 5 ಗಂಟೆ ವೇಳೆಯಲ್ಲಿ ಸಲ್ಮಾನ್ ಖಾನ್ ಮನೆಯ ಹೊರಗೆ ಮೋಟಾರ್‌ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

"ಸಲೀಂ ಖಾನ್ ಕುಟುಂಬದ ನಿವಾಸದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಮೋಟಾರ್‌ಸೈಕಲ್‌ನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಘಟನೆಯು ತುಂಬಾ ಗೊಂದಲ ಮತ್ತು ಆತಂಕಕಾರಿಯಾಗಿದೆ. ಈ ಆಘಾತಕಾರಿ ಘಟನೆಯಿಂದ ನಮ್ಮ ಕುಟುಂಬವು ಆಘಾತಕ್ಕೊಳಗಾಗಿದೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ಅವರು ಹಂಚಿಕೊಂಡಿದ್ದಾರೆ.

ಕುಟುಂಬಕ್ಕೆ ಆತ್ಮೀಯರು ಎಂದು ಹೇಳಿಕೊಳ್ಳುವ ಕೆಲವರು "ಮಾಧ್ಯಮಗಳಿಗೆ ಇಲ್ಲ ಸಲ್ಲದ ಹೇಳಿಕೆನೀಡುತ್ತಿದ್ದಾರೆ ಮತ್ತು ಘಟನೆಯನ್ನು "ಪ್ರಚಾರದ ಸ್ಟಂಟ್" ಎಂದು ಕರೆಯುತ್ತಿದ್ದಾರೆ. ಅದು ಸತ್ಯವಲ್ಲ."ಈ ಸಮಯದಲ್ಲಿ, ಈ ಅಹಿತಕರ ಘಟನೆಯ ತನಿಖೆಯಲ್ಲಿ ಕುಟುಂಬವು ಪೊಲೀಸರಿಗೆ ಸಹಾಯ ಮತ್ತು ಸಹಕಾರ ನೀಡುತ್ತಿದೆ. ನಮಗೆ ಮುಂಬೈ ಪೊಲೀಸರ ಮೇಲೆ ನಂಬಿಕೆ ಇದೆ ಮತ್ತು ನಮ್ಮ ಕುಟುಂಬವನ್ನು ರಕ್ಷಿಸಲು ಮತ್ತು ಸುರಕ್ಷಿತವಾಗಿರಿಸಲು ಅವರು ತಮ್ಮ ಸಾಮರ್ಥ್ಯದಲ್ಲಿ ಎಲ್ಲವನ್ನೂ ಮಾಡುತ್ತಾರೆ ಎಂದು ನಮಗೆ ಭರವಸೆ ನೀಡಲಾಗಿದೆ. ಎಲ್ಲರ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಫೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!