ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಶೂಟ್ ಮಾಡಿದ್ದ ಆರೋಪಿಗಳನ್ನು ಗುಜರಾತ್ ನಲ್ಲಿ ಬಂಧಿಸಿ ಕರೆತಂದಿರುವುದು  
ಬಾಲಿವುಡ್

ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಬಂಧನ

ವಾಣಿಜ್ಯ ನಗರಿ ಮುಂಬೈಯ ಬಾಂದ್ರಾ ವೆಸ್ಟ್‌ನಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಕಳೆದ ಭಾನುವಾರ ನಡೆದ ಗುಂಡಿನ ದಾಳಿ ಘಟನೆಗೆ ಸಂಬಂಧಪ್ಟಂತೆ ಮುಂಬೈ ಕ್ರೈಂ ಬ್ರಾಂಚ್ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಬಾಂದ್ರಾ ವೆಸ್ಟ್‌ನಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಕಳೆದ ಭಾನುವಾರ ನಡೆದ ಗುಂಡಿನ ದಾಳಿ ಘಟನೆಗೆ ಸಂಬಂಧಪ್ಟಂತೆ ಮುಂಬೈ ಕ್ರೈಂ ಬ್ರಾಂಚ್ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಕಳೆದ ರಾತ್ರಿ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಆರೋಪಿಗಳನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಗುಜರಾತ್‌ನ ಭುಜ್ ನಲ್ಲಿ ಬಂಧಿಸಿ ರಾತ್ರಿಯೇ ಹೆಚ್ಚಿನ ವಿಚಾರಣೆಗೆ ಮುಂಬೈಗೆ ಕರೆತಂದಿದ್ದಾರೆ.

ನಿನ್ನೆ ಸೋಮವಾರ ತಡರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ಬಳಿಕ ಮುಂಬೈನಿಂದ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈಗೆ ಕರೆತರಲಾಗಿದೆ ಎಂದು ತಿಳಿಸಿದರು.

ಮೊನ್ನೆ ಭಾನುವಾರ ಮುಂಜಾನೆ ಸಲ್ಮಾನ್ ಖಾನ್ ವಾಸವಾಗಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಶಂಕಿತರು ಹೆಲ್ಮೆಟ್ ಧರಿಸಿಕೊಂಡು ಮೋಟಾರ್ ಬೈಕ್ ನಲ್ಲಿ ಬಂದು ಗಾಳಿಯಲ್ಲಿ ಮೂರ್ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಘಟನಾ ಸ್ಥಳಕ್ಕೆ ಬಂದು ತಪಾಸಣೆ ನಡೆಸಿದ ಪೊಲೀಸರು ಇದೊಂದು "ಸೂಕ್ಷ್ಮ ಯೋಜಿತ ದಾಳಿ" ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!