ನಟ ರಣವೀರ್ ಸಿಂಗ್ 
ಬಾಲಿವುಡ್

ರಣವೀರ್ ಸಿಂಗ್ ಡೀಪ್ ಫೇಕ್ ವಿಡಿಯೋ: ಎಫ್ ಐಆರ್ ದಾಖಲು

ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟ ರಣವೀರ್ ಸಿಂಗ್ ಅವರ ಡೀಪ್ ಫೇಕ್ ವಿಡಿಯೋ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮುಂಬೈ: ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟ ರಣವೀರ್ ಸಿಂಗ್ ಅವರ ಡೀಪ್ ಫೇಕ್ ವಿಡಿಯೋ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇತ್ತೀಚಿಗೆ ರಣವೀರ್ ಸಿಂಗ್ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಎನ್ ಐ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಕೆಲವೊಂದು ಅಂಶಗಳನ್ನು ಹಂಚಿಕೊಂಡಿದ್ದರು. ಈ ವಿಡಿಯೋಗೆ ಎಐ ವಾಯ್ಸ್ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ. ರಣವೀರ್ ಸಿಂಗ್ ಅವರು ಬೆಲೆ ಏರಿಕೆ, ನಿರುದ್ಯೋಗ ಮುಂತಾದ ವಿಚಾರಗಳನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ ಎನ್ನುವ ಹಾಗೆ ವಿಡಿಯೋವನ್ನು ತಿರುಚಲಾಗಿದೆ.

ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ್ದು, ರಣವೀರ್ ಸಿಂಗ್ ಅವರ ಡೀಪ್‌ಫೇಕ್ ವೀಡಿಯೊ ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರಣವೀರ್ ಸಿಂಗ್ ವಕ್ತಾರರು ತಿಳಿಸಿದ್ದಾರೆ.

ನಟ ಅಮೀರ್ ಖಾನ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಡೀಪ್‌ಫೇಕ್ ವಿಡಿಯೋ ವೈರಲ್ ಆಗಿತ್ತು. ನಂತರ ಮುಂಬೈ ಪೊಲೀಸರು ಅನಾಮಧೇಯ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT